ದೇಶದ ಆರ್ಥಿಕತೆ ವೇಗವಾಗಿ ಬೆಳೆಯಲು ನೆರವಾಗುವಂತೆ ರಾಜ್ಯಗಳಿಗೆ ಸೀತಾರಾಮನ್ ಒತ್ತಾಯ

ಮುಂಬರುವ ವರ್ಷಗಳಲ್ಲಿ ದೇಶದ ಆರ್ಥಿಕತೆ ವೇಗವಾಗಿ ಬೆಳೆಯಲು ನೆರವಾಗುವಂತೆ ರಾಜ್ಯಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಒತ್ತಾಯಿಸಿದರು.
ವಿಡಿಯೋ ಸಂವಾದದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ವಿಡಿಯೋ ಸಂವಾದದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಮುಂಬರುವ ವರ್ಷಗಳಲ್ಲಿ ದೇಶದ ಆರ್ಥಿಕತೆ ವೇಗವಾಗಿ ಬೆಳೆಯಲು ನೆರವಾಗುವಂತೆ ರಾಜ್ಯಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಒತ್ತಾಯಿಸಿದರು.

ರಾಜ್ಯಗಳ ಮುಖ್ಯಮಂತ್ರಿಗಳು, ಹಣಕಾಸು ಸಚಿವರು ಹಾಗೂ ಕೇಂದ್ರಾಡಳಿತ ಪ್ರದೇಶದ ಉಪ ರಾಜ್ಯಪಾಲರೊಂದಿಗೆ ವರ್ಚುಯಲ್ ಮೂಲಕ ಸಂವಾದ ನಡೆಸಿದ ನಿರ್ಮಲಾ ಸೀತಾರಾಮನ್, ಆಕರ್ಷಕ ಹೂಡಿಕೆ ತಾಣ, ಸುಲಭ ವ್ಯವಹಾರ ಹಾಗೂ ಇಂಧನ ಸುಧಾರಣೆಗಳನ್ನು ಕೈಗೊಳ್ಳುವುದರೊಂದಿಗೆ ದೇಶ ಆರ್ಥಿಕವಾಗಿ ಬೆಳೆಯಲು ರಾಜ್ಯಗಳು ನೆರವಾಗಬೇಕು ಎಂದರು.

ಅನೇಕ ಪ್ರಕರಣಗಳಲ್ಲಿ ಯೋಜನೆಗಳನ್ನು ಕೈಗೊಳ್ಳುವುದರಲ್ಲಿ ಭೂಮಿ ದೊಡ್ಡ ಅಡಚಣೆಯಾಗಿದ್ದು, ರಾಜ್ಯಗಳು ಭೂ ಸ್ವಾಧೀನ ಪ್ರಕ್ರಿಯೆಯನ್ನು ಸುಲಭಗೊಳಿಸಬೇಕು , ಆರ್ಥಿಕವಾಗಿ ಸುಧಾರಿಸುವ ನಿಟ್ಟಿನಲ್ಲಿ ಹೂಡಿಕೆ ವಾತಾವರಣ ಮತ್ತು ಅವಕಾಶವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು. 

ಕೋವಿಡ್ -19 ಸಾಂಕ್ರಾಮಿಕದ ಎರಡನೇ ಅವಧಿ ನಂತರ ಆರ್ಥಿಕತೆ ಗಮನಾರ್ಹ ರೀತಿಯಲ್ಲಿ ಬೆಳವಣಿಗೆಯಾಗಿದೆ. ಆಮದು, ರಫ್ತು, ಉತ್ಪಾದನೆ, ಡಿಜಿಟಲ್ ಪಾವತಿ ಸಾಂಕ್ರಾಮಿಕ ಅವಧಿಗೂ ಮುಂಚೆ ಇದ್ದ ರೀತಿಗೆ ಈಗಾಗಲೇ ತಲುಪಿದೆ. ನಗರ ಸ್ಥಳೀಯ ಸಂಸ್ಥೆಗಳು ರಾಜ್ಯಗಳು ಬಲಪಡಿಸುವಂತೆ ನಿರ್ಮಲಾ ಸೀತಾರಾಮನ್ ಒತ್ತಾಯಿಸಿದರು.

ನಿರ್ಮಲಾ ಸೀತಾರಾಮನ್ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ , ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com