ಸತ್ಯಾಗ್ರಹ ಅಹಂಕಾರವನ್ನು ಸೋಲಿಸಿತು: 3 ಕೃಷಿ ಮಸೂದೆಗಳ ರದ್ದು ಕುರಿತು ರಾಹುಲ್ ಗಾಂಧಿ

ಅನ್ನದಾತರ ಸತ್ಯಾಗ್ರಹವು ಅಹಂಕಾರವು ತಲೆ ತಗ್ಗಿಸುವಂತೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಅನ್ನದಾತರ ಸತ್ಯಾಗ್ರಹವು ಅಹಂಕಾರವು ತಲೆ ತಗ್ಗಿಸುವಂತೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ.

ವಿವಾದಿತ ಮೂರು ಕೃಷಿ ಮಸೂದೆಗಳ ಕೇಂದ್ರ ಸರ್ಕಾರ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, ತಮ್ಮ ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ಅಹಂಕಾರವು ತಲೆ ತಗ್ಗಿಸುವಂತೆ ಮಾಡಿದೆ. ಅನ್ಯಾಯದ ವಿರುದ್ಧದ ಜಯಕ್ಕೆ ಅಭಿನಂದನೆಗಳನ್ನು ತಿಳಿಸುತ್ತೇನೆಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, ಇದು ಇಷ್ಟು ದಿನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿಜಯವಾಗಿದೆ. ಪ್ರತಿಭಟನೆ ವೇಳೆ 700 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಇದರಲ್ಲಿ ಕೇಂದ್ರವೇ ತಪ್ಪಿತಸ್ಥರೆಂದು ತೋರುತ್ತದೆ... ಆದರೆ ರೈತರು ಅನುಭವಿಸಿದ ಸಂಕಷ್ಟಗಳಿಗೆ ಯಾರು ಹೊಣೆ ಹೊರುತ್ತಾರೆ? ಈ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇವೆಂದು ಹೇಳಿದ್ದಾರೆ.

ಇಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ನೂತನವಾಗಿ ಜಾರಿಗೆ ತರಲಾಗಿರುವ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com