ತೀವ್ರ ಎದೆನೋವು: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು
ಪುಣೆ: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಸಹ ನಡೆಸಿದ್ದರು.
ಪುಣೆಯ ರುಬೆ ಆಸ್ಪತ್ರೆಗೆ ದಾಖಲಾಗಿರುವ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಹಜಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಡಾ.ಅವಧೂತ್ ಬೋಡಮ್ವಾಡ್ ತಿಳಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಆಂಜಿಯೋಗ್ರಫಿ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ರೂಬಿ ಹಾಲ್ ಕ್ಲಿನಿಕ್‌ಗೆ ದಾಖಲಾಗಿರುವ ಭ್ರಷ್ಟಾಚಾರ-ವಿರೋಧಿ ಅಣ್ಣಾ ಹಜಾರೆ ಅವರ ಹೃದಯದ ಅಪಧಮನಿಯಲ್ಲಿನ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಸ್ಥಿರವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 84 ವರ್ಷದ ಅಣ್ಣಾ ಹಜಾರೆ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ತಜ್ಞರ ತಂಡ ಕೂಲಂಕಷವಾಗಿ ಪರೀಕ್ಷಿಸುತ್ತಿದೆ ಎಂದು ರೂಬಿ ಹಾಲ್ ಕ್ಲಿನಿಕ್ ಹೇಳಿಕೆ ತಿಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ