ಮಾರ್ಚ್‌ನಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಕೇಂದ್ರ ಸಚಿವ ನಾರಾಯಣ ರಾಣೆ 

ಮಹಾರಾಷ್ಟ್ರದಲ್ಲಿ ಅತೀ ಶೀಘ್ರದಲ್ಲೇ ಸರ್ಕಾರ ಬದಲಾಗಲಿದೆ. ಮಾರ್ಚ್ ನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಅವರು ಗುರುವಾರ ಹೇಳಿದ್ದಾರೆ.
ನಾರಾಯಣ ರಾಣೆ
ನಾರಾಯಣ ರಾಣೆ

ಜೈಪುರ: ಮಹಾರಾಷ್ಟ್ರದಲ್ಲಿ ಅತೀ ಶೀಘ್ರದಲ್ಲೇ ಸರ್ಕಾರ ಬದಲಾಗಲಿದೆ. ಮಾರ್ಚ್ ನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಅವರು ಗುರುವಾರ ಹೇಳಿದ್ದಾರೆ.

ಎರಡು ದಿನಗಳ ರಾಜಸ್ಥಾನ ಪ್ರವಾಸದಲ್ಲಿರುವ ನಾರಾಯಣ ರಾಣೆ, ಮಹಾರಾಷ್ಟ್ರದಲ್ಲಿ ಮಾರ್ಚ್ ವೇಳೆಗೆ ಬದಲಾವಣೆ ಕಾಣಲಿದೆ. ಸರ್ಕಾರ ರಚಿಸಲು ಅಥವಾ ಸರ್ಕಾರವನ್ನು ಬೀಳಿಸಲು ಕೆಲವು ವಿಷಯಗಳನ್ನು ಗೌಪ್ಯವಾಗಿಡಬೇಕು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ನಾಯಕರಾದ ದೇವೇಂದ್ರ ಫಡ್ನವೀಸ್ ಮತ್ತು ಚಂದ್ರಕಾಂತ್ ಪಾಟೀಲ್ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಪ್ರಫುಲ್ ಪಟೇಲ್ ಅವರು ದೆಹಲಿಗೆ ಭೇಟಿ ನೀಡಿದ ದಿನವೇ ರಾಣೆ ಸರ್ಕಾರ ಬದಲಾವಣೆ ಹೇಳಿಕೆ ನೀಡುವುದು ಹೆಚ್ಚು ಮಹತ್ವ ಪಡೆದುಕೊಂಡಿದೆ.

ಉದ್ಧವ್ ಠಾಕ್ರೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರ ಬಗ್ಗೆ ಈಗ ಮಾತನಾಡಬೇಡಿ ಎಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಅವರು ಹೇಳಿದರು.

ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ, ಮುಂಬೈನ ಎಚ್‌ಎನ್ ರಿಲಯನ್ಸ್ ಆಸ್ಪತ್ರೆಯ ವೈದ್ಯರು ಸಿಎಂ ಉದ್ಧವ್ ಠಾಕ್ರೆ ಅವರಿಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದರು. ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪ್ರಸ್ತುತ ಸರ್ಕಾರ ಪತನವಾಗಲಿದ್ದು, ಬಿಜೆಪಿ ನೇತೃತ್ವದ ಹೊಸ ಸರ್ಕಾರ ರಚನೆಯಾಗಲಿದೆ ಎಂದು ರಾಣೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com