ತಮಿಳುನಾಡಿನಲ್ಲಿ ಭಾರೀ ಮಳೆ: ರೆಡ್ ಅಲರ್ಟ್; 27 ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ

ತಮಿಳುನಾಡಿನಲ್ಲಿ ಮಳೆಯ ರೌದ್ರನರ್ತನ ಮುಂದುವರಿದಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ತಮಿಳು ನಾಡು ಮಳೆ
ತಮಿಳು ನಾಡು ಮಳೆ
Updated on: 

ಚೆನ್ನೈ: ತಮಿಳುನಾಡಿನಲ್ಲಿ ಮಳೆಯ ರೌದ್ರನರ್ತನ ಮುಂದುವರಿದಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನ ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 27 ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ.  ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಸಾಕಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಮುಳುಗಡೆಯಾಗಿದ್ದರೆ, ರಸ್ತೆಗಳು ಜಲಾವೃತಗೊಂಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಸೃಷ್ಟಿಸಿವೆ.

ತಮಿಳುನಾಡಿನಲ್ಲಿ ಕಳೆದ ತಿಂಗಳಿನಿಂದ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ತೂತುಕುಡಿ, ಕನ್ಯಾಕುಮಾರಿ, ತಿರುನಲ್ವೇಲಿ, ಕಡಲೂರು, ತಿರುವರೂರು, ತೆಂಕಶಿ ಮತ್ತು ವಿಲ್ಲುಪುರಂ ಸೇರಿದಂತೆ  27 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com