ಓಮಿಕ್ರಾನ್ ಭೀತಿ: ಅಂತಾರಾಷ್ಟ್ರೀಯ ವಿಮಾನ ಪುನರಾರಂಭಿಸುವ ನಿರ್ಧಾರ ಪರಿಶೀಲಿಸಲು ಕೇಂದ್ರ ನಿರ್ಧಾರ

ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸೇವೆಯನ್ನು ಪುನರಾರಂಭಿಸುವ ನಿರ್ಧಾರವನ್ನು ಮರು..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸೇವೆಯನ್ನು ಪುನರಾರಂಭಿಸುವ ನಿರ್ಧಾರವನ್ನು ಮರು ಪರಿಶೀಲಿಸಲು ಕೇಂದ್ರ ಸರ್ಕಾರ ಭಾನುವಾರ ನಿರ್ಧರಿಸಿದೆ.

ಇನ್ನೂ ವಿದೇಶದಿಂದ ವಿಶೇಷವಾಗಿ 'ಅಪಾಯದಲ್ಲಿರುವ' ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಪರೀಕ್ಷೆ ಮತ್ತು ಕಣ್ಗಾವಲು ಹೆಚ್ಚಿಸಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

'ಓಮಿಕ್ರಾನ್' ಕೋವಿಡ್ ಹೊಸ ರೂಪಾಂತರಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಒಂದು ದಿನದ ನಂತರ ಕೇಂದ್ರ ಗೃಹ ಕಾರ್ಯದರ್ಶಿಗಳು ಸಭೆ ನಡೆಸಿದ್ದಾರೆ.

ಸುಮಾರು 20 ತಿಂಗಳುಗಳ ಸುದೀರ್ಘ ವಿರಾಮದ ನಂತರ ಡಿಸೆಂಬರ್ 15 ರಿಂದ ನಿಗದಿತ ಅಂತರರಾಷ್ಟ್ರೀಯ ವಾಣಿಜ್ಯ ವಿಮಾನಗಳನ್ನು ಪುನರಾರಂಭಿಸುವುದಾಗಿ ನವೆಂಬರ್ 26 ರಂದು ಕೇಂದ್ರ ಸರ್ಕಾರ ಘೋಷಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com