ಚರ್ಚೆಯಿಲ್ಲದೆ ಕೃಷಿ ಕಾನೂನುಗಳ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ: ರಾಹುಲ್ ಗಾಂಧಿ

ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲಿದೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ಅದೇ ರೀತಿ ಕಾಯ್ದೆಯನ್ನು ರದ್ದುಪಡಿಸಿದೆ. ಆದರೆ, ಚರ್ಚೆಯಿಲ್ಲದೆ ಕಾಯ್ದೆ ಹಿಂಪಡೆದುಕೊಂಡಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಚರ್ಚೆ ನಡೆಸಲು ಸರ್ಕಾರಕ್ಕೆ ಭಯವಿದೆ. ರೈತರು ಪ್ರತಿನಿಧಿಸುವ ಭಾರತೀಯ ಜನರ ಬಲವನ್ನು ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com