ನವದೆಹಲಿ: ಅಡ್ಮಿರಲ್ ಆರ್ ಹರಿಕುಮಾರ್ ನ.30 ರಂದು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ನೌಕಾಪಡೆಯ ಹಾಲಿ ಮುಖ್ಯಸ್ಥ ಅಡ್ಮಿರಲ್ ಕರಮ್ಬಿರ್ ಸಿಂಗ್ ನ.30 ರಂದು ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಹೊಸ ಮುಖ್ಯಸ್ಥರು ಅಧಿಕಾರ ವಹಿಸಿಕೊಂಡಿದ್ದಾರೆ.
1962 ರ ಏಪ್ರಿಲ್ 12 ರಂದು ಜನಿಸಿದ ಉಪ ಅಡ್ಮಿರಲ್ ಕುಮಾರ್ ಅವರು 1983 ರ ಜ.1 ರಂದು ಸೇವೆಗೆ ಸೇರ್ಪಡೆಯಾಗಿದ್ದರು. ಐಎನ್ ಎಸ್ ನಿಶಾಂಕ್, ಮಿಸೈಲ್ ಕಾರ್ವೆಟ್, ಐಎನ್ಎಸ್ ಕೋರಾ, ಗುರಿ ನಿರ್ದೇಶಿತ ಕ್ಷಿಪಣಿ ವಿಧ್ವಂಸಕ INS ರಣವೀರ್ ಗಳಲ್ಲಿ ಕಾರ್ಯನಿರ್ವಹಿಸಿರುವ ಕುಮಾರ್ ಅವರು ಅಪಾರ ಅನುಭವ ಹಾಗೂ ಹಿಡಿತವನ್ನು ಹೊಂದಿದ್ದಾರೆ.
ನೌಕಾಪಡೆಯ ಅಡ್ಮಿರಲ್ ಆಗಿ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಉಪಅಡ್ಮಿರಲ್ ಆಗಿದ್ದ ಆರ್ ಹರಿಕುಮಾರ್ ವೆಸ್ಟ್ರನ್ ನೌಕಾ ಕಮಾಂಡ್ ನ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
Advertisement