ಕನ್ಹಯ್ಯ ಮತ್ತೋರ್ವ ಸಿಧು, ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ: ಆರ್ ಜೆಡಿ
ಪಾಟ್ನಾ: ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತೋರ್ವ ನವಜೋತ್ ಸಿಂಗ್ ಸಿಧುವಿನಂತೆ ದೇಶದ ಅತ್ಯಂತ ಹಳೆಯ ಪಕ್ಷವನ್ನು ನಾಶಪಡಿಸುವುದಾಗಿ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷ ಆರ್ ಜೆಡಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ವ್ಯಂಗ್ಯವಾಡಿದೆ.
ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ ಆರ್ ಜೆಡಿ ಹಿರಿಯ ಮುಖಂಡ ಶಿವಾನಂದ ತಿವಾರಿ, ಕನ್ಹಯ್ಯ ಕುಮಾರ್ ಸೇರ್ಪಡೆಯಿಂದ ಯಾವುದೇ ಕಾಂಗ್ರೆಸ್ ನಲ್ಲಿ ವ್ಯತ್ಯಾಸವಾಗದು ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ದೊಡ್ಡ ಹಡಗು, ಅದನ್ನು ಉಳಿಸಬೇಕಾದ ಅಗತ್ಯವಿದೆ ಎಂಬ ಕನ್ಹಯ್ಯ ಕುಮಾರ್ ಹೇಳಿಕೆ ಉಲ್ಲೇಖಿಸಿದ ತಿವಾರಿ, ಆತ ಮತ್ತೋರ್ವ ನವಜೋತ್ ಸಿಂಗ್ ಸಿಧು ತರಹ, ಪಕ್ಷವನ್ನು ಹಾಳು ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಆಗಿದ್ದು, ಅದಕ್ಕೆ ಯಾವುದೇ ಭವಿಷ್ಯವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.
ತೇಜಸ್ವಿ ಯಾದವ್ ನೇತೃತ್ವದ ಪಕ್ಷದೊಂದಿಗೆ ಸಮಾಲೋಚಿಸದೆ ಕನ್ಹಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಗ್ಗೆ ಆರ್ ಜೆಡಿ ಪಕ್ಷದಲ್ಲಿ ಅಸಮಾಧಾನ ಇರುವುದಾಗಿ ಮೂಲಗಳು ಹೇಳಿವೆ.
ಕಳೆದ ವರ್ಷ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪೈಪೋಟಿ ನಡೆಸಿದ ಆರ್ ಜೆಡಿ ನೇತೃತ್ವದ ಮಹಾಘಟ್ ಬಂಧನ್ ನಲ್ಲಿ ಕಾಂಗ್ರೆಸ್ ಕೂಡಾ ಮೈತ್ರಿ ಪಕ್ಷವಾಗಿತ್ತು. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಕಾಂಗ್ರೆಸ್ ಮುಖಂಡರು ನಿರಾಕರಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ