ಉತ್ತರ ಪ್ರದೇಶ: ಮಧ್ಯಾಹ್ನ ಊಟದ ಸಮಯದಲ್ಲಿ ದಲಿತ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಿದ ಪ್ರಾಂಶುಪಾಲ ಅಮಾನತು

ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ವನಪುರ್ವಾ ಗಡೇರಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರು ಶಾಲಾ ಆವರಣದಲ್ಲಿ ಮಧ್ಯಾಹ್ನದ ಊಟದ ವೇಳೆ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು...
ದಲಿತ ವಿದ್ಯಾರ್ಥಿಗಳ ಪೋಷಕ
ದಲಿತ ವಿದ್ಯಾರ್ಥಿಗಳ ಪೋಷಕ
Updated on

ಲಖನೌ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ವನಪುರ್ವಾ ಗಡೇರಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರು ಶಾಲಾ ಆವರಣದಲ್ಲಿ ಮಧ್ಯಾಹ್ನದ ಊಟದ ವೇಳೆ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಸರತಿ ಸಾಲಿನಲ್ಲಿ ಕೂರುವಂತೆ ಮಾಡಿದ್ದರು. ಅಲ್ಲದೆ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ.

"ಶಿಕ್ಷಕ ಕುಸುಮ್ ಸೋನಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಮತ್ತು ಊಟಕ್ಕೆ ಮೇಲ್ಜಾತಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸರತಿ ಸಾಲುಗಳನ್ನು ಮಾಡಿದ್ದರು”ಎಂದು ದಲಿತ ಸಮುದಾಯಕ್ಕೆ ಸೇರಿದ ಪೋಷಕರಲ್ಲಿ ಒಬ್ಬರಾದ ನಾರಾಯಣ್ ಅವರು ಆರೋಪಿಸಿದ್ದಾರೆ.

ಆದಾಗ್ಯೂ, ಪ್ರಾಂಶುಪಾಲರಾದ ಕುಸುಮ್ ಸೋನಿ ಮತ್ತು ಗ್ರಾಮದ ಮುಖ್ಯಸ್ಥ ವಿನಯ್ ಕುಮಾರ್ ಜೈಸ್ವಾಲ್ ಅವರ ವಿರುದ್ಧ ದೂರು ದಾಖಲಿಸಿದ್ದು, ಶಾಲೆಯ ಆವರಣದಲ್ಲಿ ಗಲಾಟೆ ಸೃಷ್ಟಿಸಿ ಗೇಟ್‌ಗಳಿಗೆ ಬೀಗ ಹಾಕಿದ್ದಾರೆ.

ಕುಸುಮ್ ಸೋನಿ ಅವರು ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದು, "ನಾನು ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ. ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟಿಗೆ ಕೂರಿಸಲಾಗಿದೆ ಎಂದು ಹೇಳಿದ್ದಾರೆ.

ತಾನು ಹಳ್ಳಿಯ ಮುಖ್ಯಸ್ಥನ ಪ್ರತಿನಿಧಿ ಎಂದು ಹೇಳಿಕೊಂಡ ಪವನ್ ದುಬೆ ಎಂಬ ವ್ಯಕ್ತಿ ಇಲ್ಲಿಗೆ ಬಂದು, ಎಲ್ಲರನ್ನು ಹೊರಗೆ ತಳ್ಳಿ, ಗೇಟ್‌ಗಳನ್ನು ಲಾಕ್ ಮಾಡಿ, ಶಾಲೆಯ ಚಿತ್ರಗಳನ್ನು ಕ್ಲಿಕ್ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ನಾನು ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಸೋನಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com