ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ: ಮತ ಎಣಿಕೆ ಆರಂಭ, ಇಂದು ಸಿಎಂ ಮಮತಾ ಬ್ಯಾನರ್ಜಿ ಭವಿಷ್ಯ ನಿರ್ಧಾರ 

ಇಂದು ಅಕ್ಟೋಬರ್ 3 ಭಾನುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜಕೀಯ ಭವಿಷ್ಯ ನಿರ್ಧಾರವಾಗುವ ದಿನ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಭವಾನಿಪುರ(ಪಶ್ಚಿಮ ಬಂಗಾಳ): ಇಂದು ಅಕ್ಟೋಬರ್ 3 ಭಾನುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜಕೀಯ ಭವಿಷ್ಯ ನಿರ್ಧಾರವಾಗುವ ದಿನ.

ನಂದಿಗ್ರಾಮ ಕ್ಷೇತ್ರದಲ್ಲಿ ಸೋತು ಟಿಎಂಸಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಸಿಕ್ಕಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂತು. 6 ತಿಂಗಳ ಬಳಿಕ ಭವಾನಿಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಎಂಸಿಯಿಂದ ಮಮತಾ ಬ್ಯಾನರ್ಜಿ, ಬಿಜೆಪಿಯಿಂದ ಪ್ರಿಯಾಂಕ ತಿಬ್ರೆವಾಲ್ ಸ್ಪರ್ಧಿಸಿದ್ದಾರೆ.

ಇಂದು ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಮಧ್ಯಾಹ್ನದ ಹೊತ್ತಿಗೆ ಯಾರು ಗೆಲ್ಲುತ್ತಾರೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಇದರ ಜೊತೆಗೆ ಜಂಗಿಪುರ್ ಮತ್ತು ಸಮ್ಸೆರ್ಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ಸಹ ಉಪ ಚುನಾವಣೆ ಮೊನ್ನೆ 30ರಂದು ನಡೆದಿದ್ದು ಇಂದೇ ಫಲಿತಾಂಶ ಪ್ರಕಟವಾಗಲಿದೆ.

ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಭವಾನಿಪುರ ಕ್ಷೇತ್ರದಲ್ಲಿ 21 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದೆ. ಭವಾನಿಪುರ ಕ್ಷೇತ್ರ ಹೈ ಪ್ರೊಫೈಲ್ ಆಗಿರುವುದರಿಂದ ಭಾರೀ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕೇಂದ್ರ ಪಡೆಗಳ 24 ತಂಡಗಳನ್ನು ಕರೆಸಿಕೊಳ್ಳಲಾಗಿದೆ.

ಸೆಪ್ಟೆಂಬರ್ 30ರಂದು ನಡೆದಿದ್ದ ಉಪ ಚುನಾವಣೆಯಲ್ಲಿ ಭವಾನಿಪುರ ಕ್ಷೇತ್ರದಲ್ಲಿ ಶೇಕಡಾ 53.32ರಷ್ಟು ಮತದಾನವಾಗಿತ್ತು. ಸಂಸರ್ ಗಂಜ್ ಕ್ಷೇತ್ರದಲ್ಲಿ ಶೇಕಡಾ 78.60 ಮತ್ತು ಜಂಗೀಪುರ ಕ್ಷೇತ್ರದಲ್ಲಿ ಶೇಕಡಾ 76.12ರಷ್ಟು ಮತದಾನವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com