
ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರ ಹತ್ಯೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ತೀವ್ರವಾಗಿ ಖಂಡಿಸಿದ್ದು, ಅವರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದಿದ್ದಾರೆ.
ವರದಿಗಳ ಪ್ರಕಾರ, ಟಿಕುನಿಯಾ ಪ್ರದೇಶದಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಸಮಾರಂಭದ ಬಳಿ ರೈತರು ನಡೆಸಿದ ಪ್ರತಿಭಟನೆಯಲ್ಲಿ ಹಿಂಸಾಚಾರ ಉಂಟಾಗಿತ್ತು. ಘಟನೆಯಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿತ್ತು.
ಇದನ್ನು ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಖಂಡಿಸಿದ್ದು, ಈ ಅಮಾನವೀಯ ಹತ್ಯಾಕಾಂಡವನ್ನು ನೋಡಿದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ. ಆದರೆ ನಾವು ಈ ತ್ಯಾಗವನ್ನು ವ್ಯರ್ಥವಾಗಿ ಬಿಡುವುದಿಲ್ಲ - ಕಿಸಾನ್ ಸತ್ಯಾಗ್ರಹ ಜಿಂದಾಬಾದ್! ರೈತ ರಕ್ಷಣೆ, ಎಂದಿದ್ದಾರೆ.
Advertisement