ಲಂಖಿಪುರ್ ಖೇರಿ ಹಿಂಸಾಚಾರ ಪ್ರಕರಣ: ಕಾನೂನಿನ ಪ್ರಕಾರವೇ ನಿರ್ಧಾರ ಕೈಗೊಂಡಿದ್ದೇವೆ ಎಂದ ಉತ್ತಪ್ರದೇಶ ಸರ್ಕಾರ

ಲಖಿಂಪುರ್ ಖೇರಿ ಘಟನೆ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ವಿರೋಧ ಪಕ್ಷಗಳು ಋಣಾತ್ಮಕ ಧೋರಣೆಗಳನ್ನು ಅಳವಡಿಸಿಕೊಂಡಿದೆ. ಹೀಗಾಗಿ ಅಲ್ಲಿನ ವಾತಾವರಣ ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನಿನ ಪ್ರಕಾರ ನಾವು ನಿರ್ಧಾರಗಳನ್ನು ಕೈಗೊಂಡಿದ್ದೇವೆಂದು ಉತ್ತರಪ್ರದೇಶ ಸರ್ಕಾರ ಬುಧವಾರ ಹೇಳಿದೆ.
ಘಟನಾ ಸ್ಥಳದಲ್ಲಿರುವ ಪೊಲೀಸರು.
ಘಟನಾ ಸ್ಥಳದಲ್ಲಿರುವ ಪೊಲೀಸರು.
Updated on

ಲಖನೌ: ಲಖಿಂಪುರ್ ಖೇರಿ ಘಟನೆ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ವಿರೋಧ ಪಕ್ಷಗಳು ಋಣಾತ್ಮಕ ಧೋರಣೆಗಳನ್ನು ಅಳವಡಿಸಿಕೊಂಡಿದೆ. ಹೀಗಾಗಿ ಅಲ್ಲಿನ ವಾತಾವರಣ ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನಿನ ಪ್ರಕಾರ ನಾವು ನಿರ್ಧಾರಗಳನ್ನು ಕೈಗೊಂಡಿದ್ದೇವೆಂದು ಉತ್ತರಪ್ರದೇಶ ಸರ್ಕಾರ ಬುಧವಾರ ಹೇಳಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನಿರಾಕರಿಸಿರುವುದಕ್ಕೆ ಸ್ಪಷ್ಟನೆ ನೀಡಿರುವ ಸರ್ಕಾರದ ವಕ್ತಾರ ಹಾಗೂ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಅವರು, ಲಖಿಂಪುರ್ ಖೇರಿ ಘಟನೆಯನ್ನು ತಮ್ಮ ಲಾಭಕ್ಕೆ ಬಳಕೆ ಮಾಡಿಕೊಳ್ಳಲು ವಿರೋಧ ಪಕ್ಷಗಳು ಯತ್ನಿಸುತ್ತಿವೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆಂದು ವ್ಯಂಗ್ಯವಾಡಿದ್ದಾರೆ. 

ಕಾನೂನಿನ ಪ್ರಕಾರವೇ ನಾವು ಈ ನಿರ್ಧಾರಗಳನ್ನು ಕೈಗೊಂಡಿದ್ದೇವೆ. ಘಟನೆ ಸಂಬಂಧ ತಪ್ಪಿತಸ್ಥರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ, ಘಟನೆ ಸಂಬಂಧ ವಿರೋಧ ಪಕ್ಷಗಳ ಧೋರಣೆ ನಕಾರಾತ್ಮಕವಾಗಿವೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಫೋಟೋ ತೆಗೆದುಕೊಳ್ಳಲು ಅವಕಾಶಕ್ಕೆ ಮುಂದಾಗುತ್ತಿದ್ದಾರೆ. ಇನ್ನೂ ಕೆಲವರು ಮನೆಯಲ್ಲೇ ಕುಳಿತುಕೊಂಡು ಟ್ವಿಟರ್ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಹೀಗಾಗಿ, ಇಲ್ಲಿನ ವಾತಾವರಣ ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. 

ವಿರೋಧ ಪಕ್ಷದ ನಾಯಕರು ಲಖಿಂಪುರ್ ಖೇರಿಗೆ ಭೇಟಿ ನೀಡಲೇಬೇಕಿದ್ದರೆ, ಕೆಲವು ದಿನಗಳ ನಂತರ ಬರಲಿ. ನಂತರ ಸಂತ್ರಸ್ತ ಕುಟುಂಬಸ್ಥರನ್ನು ಭೇಟಿ ಮಾಡಲಿ. ಇದಕ್ಕೆ ನಮ್ಮ ವಿರೋಧವಿರುವುದಿಲ್ಲ ಎಂದಿದ್ದಾರೆ. 

ಇದೇ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಈಗಾಗಲೇ ಸಹೋದರಿ ಪ್ರಿಯಾಂಕಾ ಗಾಂಧಿ ಪ್ರವಾಸ ಮಾಡಿದ್ದಾಯಿತು. ಇದೀಗ ಯುವರಾಜ ರಾಜಕೀಯ ಪ್ರವಾಸ ಕೈಗೊಳ್ಳಲು ಮುಂದಾಗುತ್ತಿದ್ದಾರೆ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಹತ್ಯಾಕಾಂಡ ನಡೆದಾಗ ಕಾಂಗ್ರೆಸ್ ಆಡಳಿತದಲ್ಲಿತ್ತು ಎಂಬುದನ್ನು ರಾಹುಲ್ ಗಾಂಧಿ ನೆನಪಿಸಿಕೊಳ್ಳಬೇಕಿದೆ. 

ಸತ್ಯಾಸತ್ಯತೆ ತಿಳಿದು ರಾಹುಲ್ ಗಾಂಧಿ ಲಖಿಂಪುರ್ ಖೇರಿಗೆ ಭೇಟಿ ನೀಡಬೇಕಿದೆ. ಏನು ತಿಳಿದಿಲ್ಲ ಎಂದಾದರೆ ನೀವು ಹಾಗೂ ನಿಮ್ಮ ಸಹೋದರಿ ಏಕೆ ಭೇಟಿ ನೀಡುತ್ತೀರಿ. ಸಿತಾಪುರದಲ್ಲಿ ಡ್ರೋಣ್ ಬಳಸುತ್ತಿರುವ ಫೋಟೋವನ್ನು ಹಾಕಿದ್ದೀರಿ. ಅದರಲ್ಲಿ ತಪ್ಪೇನಿದೆ? ಇತ್ತೀಚಿನ ದಿನಗಳಲ್ಲಿ ಪೊಲೀಸರು ಬಳಸುತ್ತಿರುವ ತಂತ್ರಜ್ಞಾನಗಳಲ್ಲಿ ಅದೂ ಕೂಡ ಒಂದಾಗಿದೆ ಎಂದಿದ್ದಾರೆ. 

ಇದೇ ವೇಳೆ ಮರಣೋತ್ತರ ಪರೀಕ್ಷೆ ಕುರಿತ ಆರೋಪಕ್ಕೂ ಪ್ರತಿಕ್ರಿಯೆ ನೀಡಿದ ಸಿಂಗ್ ಅವರು, ಸಂತ್ರಸ್ತ ಕುಟುಂಬಗಳು ಮರಣೋತ್ತರ ಪರೀಕ್ಷೆಯ ವರದಿಯನ್ನು ಒಪ್ಪಿಕೊಂಡಿವೆ. ಒಂದು ಕುಟುಂಬದ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಾಲ್ಕು ವೈದ್ಯರ ಸಮಿತಿ ರಚಿಸಿ ಮರು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಸಂಪೂರ್ಣ ಪಾರದರ್ಶಕತೆಯಿಂದ ತನಿಖೆ ನಡೆಸಲಾಗುತ್ತಿದೆ. ಪಂಜಾಬ್ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಆ ರಾಜ್ಯಗಳಲ್ಲಿ ರೈತರ ಮೇಲೆ ದೌರ್ಜನ್ಯ ಎಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com