ಕಾಶ್ಮೀರ: ಉಗ್ರರ ಗುಂಡೇಟಿಗೆ ಇಬ್ಬರು ಶಿಕ್ಷಕರು ಬಲಿ; ಭಯ ಹುಟ್ಟಿಸಲು ನಾಗರಿಕ ಹತ್ಯೆ ಎಂದ ಡಿಜಿಪಿ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಇಂದು ಬೆಳಗ್ಗೆ ಈ ಕುಕೃತ್ಯ ನಡೆದಿದ್ದು, ಭಯೋತ್ಪಾದಕರು ನಗರದ ಈದ್ಗಾ ಪ್ರದೇಶದ ಸಂಗಮದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕರಾದ ಸತೀಂದರ್ ಕೌರ್ ಮತ್ತು ದೀಪಕ್ ಚಂದ್ ಮೇಲೆ ಅತ್ಯಂತ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ.

ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆ ನಡೆದ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಹಂತಕರನ್ನು ಹಿಡಿಯಲು ಭಾರೀ ಶೋಧಕಾರ್ಯ ಆರಂಭಿಸಲಾಗಿದೆ.

ಕಳೆದ ಮೂರು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ನಾಲ್ಕನೇ ದಾಳಿ ಇದಾಗಿದೆ. ಅಕ್ಟೋಬರ್ 5 ರಂದು ಕಾಶ್ಮೀರಿ ಪಂಡಿತ ಎಂ ಎಲ್ ಬಿಂದ್ರೂ, ಕಾಶ್ಮೀರಿ ಮುಸ್ಲಿಂ ಮತ್ತು ಬಿಹಾರ ನಿವಾಸಿ ಶ್ರೀನಗರ ಹಾಗೂ ಬಂಡಿಪೋರಾದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಹತರಾಗಿದ್ದರು.

ಇತ್ತೀಚೆಗೆ ಉಗ್ರರ ನಾಗರಿಕರನ್ನು, ವಿಶೇಷವಾಗಿ ಕಾಶ್ಮೀರ ಕಣಿವೆಯ ಅಲ್ಪಸಂಖ್ಯಾತ ಸಮುದಾಯದವರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗುತ್ತಿದ್ದು, ಇದು ಭಯದ ವಾತಾವರಣ ಸೃಷ್ಟಿಸುವ ಮತ್ತು ಕೋಮು ಸೌಹಾರ್ದವನ್ನು ಹಾಳು ಮಾಡುವ ಗುರಿ ಹೊಂದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ದಿಲ್ಬಾಗ್ ಸಿಂಗ್ ಅವರು ಹೇಳಿದ್ದಾರೆ.

"ಕೆಲವು ದಿನಗಳಿಂದ ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸುವ ಘಟನೆಗಳು ನಡೆಯುತ್ತಿವೆ. ಸಮಾಜಕ್ಕಾಗಿ ದುಡಿಯುತ್ತಿರುವ ಮತ್ತು ಯಾರೊಂದಿಗೂ ಸಂಬಂಧವಿಲ್ಲದ ಅಮಾಯಕರನ್ನು ಗುರಿಯಾಗಿಸಲಾಗುತ್ತಿದೆ. ಇದು ಭಯದ ವಾತಾವರಣವನ್ನು ಸೃಷ್ಟಿಸುವ ಮತ್ತು ಕಾಶ್ಮೀರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರಲು ಯತ್ನಿಸಲಾಗುತ್ತಿದೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com