ಮಹಾರಾಷ್ಟ್ರದಲ್ಲಿ ಮತ್ತೊಂದು ಗ್ಯಾಂಗ್ ರೇಪ್: ನಾಲ್ವರ ಬಂಧನ, ಶಂಕಿತ ಮೂರು ಆರೋಪಿಗಳಿಗೆ ತೀವ್ರ ಶೋಧ

ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮುಂಬೈ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 16 ವರ್ಷದ ಬಾಲಕಿಯ ಮೇಲೆ ಆಕೆಯ ಗೆಳೆಯ ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರ ಮಾಡಿದ್ದು, ಇದೀಗ ಆಪ್ರಾಪ್ತೆಯ ಗೆಳೆಯ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಗೆಳೆಯರಿಂದ ಹಣ ಪಡೆದಿದ್ದ ಬಾಯ್ ಫ್ರೆಂಡ್
ತನ್ನ ಆಪ್ರಾಪ್ತ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ತನ್ನ ಸ್ನೇಹಿತರಿಂದ ಆರೋಪಿ  ಗೆಳೆಯ ಹಣ ಪಡೆದಿದ್ದ ಎಂಬ ರೋಚಕ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪೊಲೀಸರು ನಿನ್ನೆ ಸಂತ್ರಸ್ಥೆಯ ಗೆಳೆಯ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಮೂರು ಮಂದಿ ಆರೋಪಿಗಳು ಇದ್ದು ಅವರು ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು MIDC ಪೊಲೀಸರು ಹೇಳಿದ್ದಾರೆ.

ಈಗ್ಗೆ 2 ದಿನಗಳ ಹಿಂದೆ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆಪ್ರಾಪ್ತೆಯನ್ನು ಪೊಲೀಸರು ನೋಡಿ ವಿಚಾರಿಸಿದಾಗ ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿತ್ತು. ಕೂಡಲೇ ಪೊಲೀಸರು ಆಕೆಯನ್ನು ಪೋಷಕರಿಗೆ ಒಪ್ಪಿಸಿದ್ದರು. ಅಲ್ಲದೆ MIDC ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಅಪ್ರಾಪ್ತ ಮೇಲೆನ ಅತ್ಯಾಚಾರ ಪ್ರಕರಣಗಳ ಪೈಕಿ ಇದು 2ನೇ ಪ್ರಕರಣವಾಗಿದೆ.  

ಕಳೆದ ನವೆಂಬರ್ ನಲ್ಲಿ ಇದೇ ಠಾಣೆಯಲ್ಲಿ ಆಪ್ರಾಪ್ತೆಯೊಬ್ಬರು ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿದ್ದರು. ಆಕೆಯನ್ನು ಸರ್ಕಾರಿ ಆಶ್ರಯ ಕೇಂದ್ರದಲ್ಲಿ ಇರಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com