ಉತ್ತರ ಪ್ರದೇಶ: ಜೇವರ್ ದಲಿತ ಮಹಿಳೆ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮೂರು ದಿನಗಳ ಹಿಂದೆ ಜೇವರ್ ನ ಲ್ಲಿ 55 ವರ್ಷದ ದಲಿತ ಮಹಿಳೆ ಮೇಲೆ ನಡೆದ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಗೌತಮ ಬುದ್ಧ ನಗರ ಪೊಲೀಸರು ಬುಧವಾರ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನೋಯ್ಡಾ: ಮೂರು ದಿನಗಳ ಹಿಂದೆ ಜೇವರ್ ನ ಲ್ಲಿ 55 ವರ್ಷದ ದಲಿತ ಮಹಿಳೆ ಮೇಲೆ ನಡೆದ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಗೌತಮ ಬುದ್ಧ ನಗರ ಪೊಲೀಸರು ಬುಧವಾರ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಭಾನುವಾರ ಬೆಳಗ್ಗೆ ಖಾಲಿ ಮೈದಾನಕ್ಕೆ ಮಹಿಳೆಯನ್ನು ಎಳೆದೊಯ್ದಿದ್ದ ನಾಲ್ಕು ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಸೋಮವಾರ ಒಬ್ಬ ಆರೋಪಿಯನ್ನು ಬಂಧಿಸಲಾಗಿತ್ತು. 

ಈ ಘಟನೆಯು ರಾಜಕೀಯ ವಿವಾದ ಸೃಷ್ಟಿಸಿದ್ದು, ಬಿಎಸ್‌ಪಿ ಮತ್ತು ಕಾಂಗ್ರೆಸ್‌ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಮಹಿಳಾ ಸುರಕ್ಷತೆಯ ವಿಚಾರದಲ್ಲಿ ಟೀಕಿಸಿವೆ. ಆರೋಪಿ ಮಹೇಂದ್ರನನ್ನು ಬುಧವಾರ ಜೇವರ್‌ನಲ್ಲಿರುವ ಆತನ ಹಳ್ಳಿಯ ಸಮೀಪದಿಂದ ಬಂಧಿಸಲಾಗಿದೆ.

ಇನ್ನೊಬ್ಬ ಆರೋಪಿಯನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಮಹೇಂದ್ರನ  ಬಂಧನಕ್ಕೆ ಮಾಹಿತಿ ನೀಡಿದವರಿಗೆ 25 ಸಾವಿರ ರು ಬಹುಮಾನ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ಡಿ, 352,ಮತ್ತು  506 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು
ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com