ಸೋನಿಪತ್: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಸೋನಿಪತ್‌ನಲ್ಲಿ ಒಬ್ಬನನ್ನು ಬಂಧಿಸಿದ್ದಾರೆ.
ಶಂಕಿತ ಆರೋಪಿಯನ್ನು ಸೋನಿಪತ್‌ನ ಕುಂಡ್ಲಿಯಿಂದ ಬಂಧಿಸಲಾಗಿದ್ದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಸಿಂಘು ಗಡಿ ಸಮೀಪದ ರೈತರ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬ್ಯಾರಿಕೇಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್‌ಪಿ) ಹಂಸರಾಜ್ ಹೇಳಿದರು.
ಮೃತ ವ್ಯಕ್ತಿಯನ್ನು 36 ವರ್ಷದ ಲಖ್ ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಪಂಜಾಬ್ ನ ಟಮ್ ಟರನ್ ಜಿಲ್ಲೆಯ ನಿವಾಸಿಯಾಗಿದ್ದು, ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ. ಚಿಕ್ಕ ವಯಸ್ಸಿನಲ್ಲೇ ಈತನ ಪೋಷಕರು ತೀರಿಕೊಂಡಿದ್ದರಿಂದ ದಂಪತಿಗಳಿಬ್ಬರು ಈತನನ್ನು ದತ್ತು ಪಡೆದು ಬೆಳೆಸಿದ್ದರು. ಆತ ಕೃಷಿ ಭೂಮಿಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ. ಈತನಿಗೆ ತಂಗಿ, ಪತ್ನಿ ಮತ್ತು ಮೂರು ಹೆಣ್ಣುಮಕ್ಕಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement