ದೇಶಾದ್ಯಂತ ಸಂಭ್ರಮದ ಈದ್ ಮಿಲಾದ್: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ 

ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ ಈದ್ -ಮಿಲಾದ್‌ನ್ನು ದೇಶಾದ್ಯಂತ ಮುಸ್ಲಿಮರು ಸಂಭ್ರಮದಿಂದ ಮಂಗಳವಾರ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್‌ ನಾಥ್ ಕೋವಿಂದ್ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ ಈದ್ -ಮಿಲಾದ್‌ನ್ನು ದೇಶಾದ್ಯಂತ ಮುಸ್ಲಿಮರು ಸಂಭ್ರಮದಿಂದ ಮಂಗಳವಾರ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್‌ ನಾಥ್ ಕೋವಿಂದ್ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಪ್ರಮುಖವಾಗಿ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಈಗ್ ಮಿಲಾದ್ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಇ-ಮಿಲಾದ್ ಎಂದು ಆಚರಿಸಲಾಗುತ್ತದೆ. ನಾವು ಪ್ರವಾದಿಯ ಜೀವನ ಮತ್ತು ಆದರ್ಶಗಳಿಂದ ಸ್ಫೂರ್ತಿ ಪಡೆಯೋಣ ಮತ್ತು ಸಮಾಜದ ಏಳಿಗೆ ಮತ್ತು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ದುಡಿಯೋಣ ಎಂದು ಹೇಳಿದ್ದಾರೆ. 

ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳ, ಈ ಹಬ್ಬ ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಇರಲಿ. ದಯೆ ಮತ್ತು ಸಹೋದರತ್ವದ ಗುಣಗಳು ಯಾವಾಗಲೂ ಮೇಲುಗೈ ಸಾಧಿಸಲಿ. ಈದ್ ಮುಬಾರಕ್! ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com