ಉತ್ತರಾಖಂಡ್ ಮಳೆ: ಮೃತರ ಸಂಖ್ಯೆ 16ಕ್ಕೆ ಏರಿಕೆ, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

ಕಳೆದೆರಡು ದಿನಗಳಿಂದ ಉತ್ತರಾಖಂಡ್ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ, ಭೂ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಚಾರ್ ದಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 
ಉತ್ತರಾಖಂಡ್ ನಲ್ಲಿನ ಮಳೆ ಪರಿಸ್ಥಿತಿ
ಉತ್ತರಾಖಂಡ್ ನಲ್ಲಿನ ಮಳೆ ಪರಿಸ್ಥಿತಿ

ಡೆಹ್ರಾಡೂನ್: ಕಳೆದೆರಡು ದಿನಗಳಿಂದ ಉತ್ತರಾಖಂಡ್ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ, ಭೂ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಚಾರ್ ದಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 

ಇಂದು ಬೆಳಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಕರೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ತಲೆದೋರಿಸುವ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. 

ರಾಜ್ಯದಲ್ಲಿನ ಮಳೆ ಪರಿಸ್ಥಿತಿ ಬಗ್ಗೆ ಪ್ರಧಾನಿ ಮಾಹಿತಿ ಪಡೆದಿದ್ದು, ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲಿದೆ ಎಂಬ ಆಶ್ವಾಸನೆ ನೀಡಿದ್ದೇನೆ. ಮೂರು ಹೆಲಿಕಾಫ್ಟರ್ ಗಳೊಂದಿಗೆ ನೆರವು ನೀಡುವಂತೆ ಭಾರತೀಯ ಸೇನೆಯನ್ನು ಕೇಳಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 

 ನೈನಿತಾಲ್ ಜಿಲ್ಲೆಯ ಮುಕ್ತೇಶ್ವರ ಹಳ್ಳಿಯ ಚೌಕೌಟ ಬಳಿ ನಾಲ್ವರು ಮೃತಪಟ್ಟಿದ್ದು,  ರಾಜ್ಯದಾದ್ಯಂತ ಭೂ ಕುಸಿತದಿಂದಾಗಿ ಸೋಮವಾರದವರೆಗೂ ಆರು ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು.  13 ಜಿಲ್ಲೆಯಾದ್ಯಂತ ರಾಜ್ಯ ವಿಪತ್ತು ನಿರ್ವಹಣಾ ಪಡೆಯ 34 ತಂಡಗಳನ್ನು ರಾಜ್ಯ ಸರ್ಕಾರ ಈಗಾಗಲೇ ನಿಯೋಜಿಸಿದೆ. 

 ಈ ಮಧ್ಯೆ ಕಾಂಗ್ರೆಸ್ ಮುಖಂಡೆ ಮತ್ತು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು  ಶರ್ಮಿಷ್ಠಾ ಮುಖರ್ಜಿ  ರಾಣಿ ಖೇಟ್ ಬಳಿ ಪ್ರವಾಹದಲ್ಲಿ ಸಿಲುಕಿಕೊಂಡಿರುವುದಾಗಿ ಟ್ವೀಟ್ ಮಾಡಿದ್ದಾರೆ. ರಾಣಿಖೇಟ್ ಬಳಿ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಬೆಳಗ್ಗೆಯಿಂದ ವಿದ್ಯುತ್ ಇಲ್ಲ, ದೊಡ್ಡದಾದ ಮರಗಳು ರಸ್ತೆ ಮೇಲೆ ಉರುಳಿ ಬಿದಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಮುಂದಿನ ಕೆಲ ದಿನಗಳವರೆಗೂ ವಾಪಸ್ ಮರಳದಂತಾಗಿದೆ ಎಂದು ಬರೆದುಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com