ಹೈಕೋರ್ಟ್ ನ್ಯಾಯಾಧೀಶರು ಹಾಗೂ ನ್ಯಾಯಾಂಗ ವಿರುದ್ಧ ಅವಹೇಳಕಾರಿ ಹೇಳಿಕೆ: ಸಿಬಿಐನಿಂದ ಮತ್ತೂ 5 ಆರೋಪಿಗಳ ಬಂಧನ 

16 ಆರೋಪಿಗಳಲ್ಲಿ ಐವರು ವಿದೇಶದಲ್ಲಿದ್ದು ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನಗಳು ನಡೆದಿದೆ. ಈ ಹಿಂದೆ ನ್ಯಾಯಾಂಗ ವಿರುದ್ಧದ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಿಂದ ಸಿಬಿಐ ಡಿಲೀಟ್ ಮಾಡಿಸಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯವಾಡ: ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಹಂಚಿಕೊಂಡ ಕಾರಣಕ್ಕೆ ಸಿಬಿಐ 6 ಮಂದಿಯನ್ನು ಬಂಧಿಸಿದೆ. ಈ ಹಿಂದೆ ಸಿಬಿಐ ನ್ಯಾಯಾಂಗ ವಿರುದ್ಧ ಕೆಟ್ಟದಾಗಿ ಪೋಸ್ಟ್ ಮಾಡಿದ್ದ 5 ಮಂದಿಯನ್ನು ಬಂಧಿಸಿತ್ತು. ಇದರೊಂದಿಗೆ ಬಂಧನಕ್ಕೊಳಗಾದವರ ಸಂಖ್ಯೆ 11ಕ್ಕೆ ಏರಿಕೆಯಾದಂತಾಗಿದೆ.

ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಾಧೀಶರು ನೀಡಿದ್ದ ಸೂಚನೆಯಂತೆ 2020ರಲ್ಲಿ 16 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಹೈಕೋರ್ಟ್ ಸೂಚನೆಯಂತೆ ಈ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. 

ಆರೋಪಿಗಳಲ್ಲಿ ಐವರು ವಿದೇಶದಲ್ಲಿದ್ದು ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನಗಳು ನಡೆದಿದೆ. ಈ ಹಿಂದೆ ನ್ಯಾಯಾಂಗ ವಿರುದ್ಧದ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಿಂದ ಸಿಬಿಐ ಡಿಲೀಟ್ ಮಾಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com