ಬೈಕ್ ನ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗಲು ಕೇಂದ್ರದಿಂದ ಹೊಸ ರೂಲ್ಸ್!

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(ಎಂಒಆರ್‌ಟಿಎಚ್), ಸಣ್ಣ ಮಕ್ಕಳನ್ನು ದ್ವಿಚಕ್ರ ವಾಹನದ​ ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಹೊಸ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(ಎಂಒಆರ್‌ಟಿಎಚ್), ಸಣ್ಣ ಮಕ್ಕಳನ್ನು ದ್ವಿಚಕ್ರ ವಾಹನದ​ ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಹೊಸ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. 

ಪ್ರಸ್ತಾವಿತ ನಿಯಮಗಳ ಪ್ರಕಾರ, 4 ವರ್ಷದೊಳಗಿನ ಮಕ್ಕಳನ್ನು ಮೋಟಾರ್​ ಸೈಕಲ್​​ನ ಹಿಂಬದಿಯಲ್ಲಿ ಕೂರಿಸಿಕೊಂಡು ಹೋಗುವಾಗ ವೇಗವು ಗಂಟೆಗೆ 40 ಕಿ.ಮೀಗಿಂತ ಹೆಚ್ಚಿರಬಾರದು. ಅಲ್ಲದೇ 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳನ್ನು ಕೂರಿಸಿಕೊಂಡು ಹೋಗುವುದಾದರೆ ಕ್ರ್ಯಾಶ್ ಹೆಲ್ಮೆಟ್ ಧರಿಸಬೇಕು ಎಂದಿದೆ.

ಸಚಿವಾಲಯ ಹೊರಡಿಸಿದ ಕರಡು ಅಧಿಸೂಚನೆಯ ಪ್ರಕಾರ,  4 ವರ್ಷದೊಳಗಿನ ಮಗುವನ್ನು ಮೋಟಾರ್‌ ಸೈಕಲ್‌ನಲ್ಲಿ ಕೂರಿಸಿಕೊಂಡು ಹೋಗುವಾಗ ವೇಗವು 40 ಕಿ.ಮೀಗಿಂತ ಹೆಚ್ಚಿರಬಾರದು.

ಮೋಟಾರ್ ಸೈಕಲ್‌ ಹಿಂಬದಿಯಲ್ಲಿ ಕುಳಿತ ಮಗುವನ್ನು ಸವಾರನೊಂದಿಗೆ ಕೂಡಿಸುವಂತಹ ಸುರಕ್ಷತಾ ಪಟ್ಟಿಯನ್ನು ಒದಗಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಕುರಿತು ಟ್ವೀಟ್​ ಮಾಡಿದ್ದಾರೆ.

ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಮತ್ತು ಸಲಹೆ ಇದ್ದಲ್ಲಿ, ಅದನ್ನು ನೀಡುವಂತೆ ಎಂಒಆರ್‌ಟಿಎಚ್ ಕೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com