ಗೋವಾ: ಮಮತಾ ಸಮ್ಮುಖದಲ್ಲಿ ಟಿಎಂಸಿ ಸೇರಿದ ಬಾಲಿವುಡ್ ನಫೀಸಾ ಅಲಿ, ಮೃಣಾಲಿನಿ ದೇಶಪ್ರಭು
ಪಣಜಿ: 2022ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಾಲಿವುಡ್ ನಟಿ ನಫೀಸಾ ಅಲಿ ಮತ್ತು ಮೃಣಾಲಿನಿ ದೇಶಪ್ರಭು ಅವರು ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಗೆ ಸೇರಿದರು.
"ನಫೀಸಾ ಅಲಿ ಮತ್ತು ಮೃಣಾಲಿನಿ ದೇಶಪ್ರಭು ಅವರು ಇಂದು ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಗೋವಾ ತೃಣಮೂಲ ಕಾಂಗ್ರೆಸ್ ಕುಟುಂಬವನ್ನು ಸೇರಿದ್ದಾರೆ. ನಾವು ಇಬ್ಬರೂ ನಾಯಕರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಟಿಎಂಸಿ ಟ್ವೀಟ್ ಮಾಡಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೋವಾ ಪ್ರವಾಸದಲ್ಲಿದ್ದು, ಇಂದು ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮೀನುಗಾರ ಸಮುದಾಯದೊಂದಿಗೆ ಸಂವಾದ ನಡೆಸುವ ಸಾಧ್ಯತೆ ಇದೆ.
ನಂತರ ಬ್ಯಾನರ್ಜಿ ಅವರು ಪೋಂಡಾದ ಪ್ರಿಯೋಲ್‌ನಲ್ಲಿರುವ ಮಂಗುಶಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಪೋಂಡಾದ ಮರ್ಡೋಲ್‌ನಲ್ಲಿರುವ ಶ್ರೀ ಮಹಲ್ಸಾ ನಾರಾಯಣಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಅಕ್ಟೋಬರ್ 24 ರಂದು ಗೋವಾದ ಪಣಜಿ, ನವೇಲಿಮ್ ಮತ್ತು ಸಂಗುಯೆಮ್ ಪ್ರದೇಶದಲ್ಲಿ ನಡೆದ ಮೂರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ 300 ಮಂದಿ ಟಿಎಂಸಿ ಸೇರಿದ್ದಾರೆ ಎಂದು ಪಕ್ಷ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ