ದೇಶ

ಮಹಾರಾಷ್ಟ್ರ: ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, 4 ಮಂದಿಗೆ ಗಾಯ, ಒಂದು ಸಾವು

ಮಹಾರಾಷ್ಟ್ರ: ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, 4 ಮಂದಿಗೆ ಗಾಯ, ಒಂದು ಸಾವು
ಪಾಲ್ಗಾರ್ ಕಾರ್ಖಾನೆ ಅಗ್ನಿ ದುರಂತ
Published On :

ಪಾಲ್ಗಾರ್: ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಮತ್ತು ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಓರ್ವ ಸಾವನ್ನಪ್ಪಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಬಾಯ್ಸರ್ ನಲ್ಲಿರುವ ಜಖಾರಿಯಾ ಫ್ಯಾಬ್ರಿಕ್ ಲಿಮಿಟೆಡ್ ನಲ್ಲಿ ನಿನ್ನೆ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮೊದಲು ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇದರ ತೀವ್ರತೆ ಹೆಚ್ಚಾಗಿ ಸ್ಫೋಟವಾಗಿದೆ.

ವಿಚಾರ ತಿಳಿಯುತ್ತಿದ್ದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನು ಘಟನೆಯಲ್ಲಿ ಅಲ್ಲಿದ್ದ ಕಾರ್ಮಿಕರ ಪೈಕಿ ನಾಲ್ಕು ಮಂದಿ ಗಾಯಗೊಂಡಿದ್ದು, ಓರ್ವನ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತಂದಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು ಹಲವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.