ತಮಿಳುನಾಡಿನಲ್ಲಿ ಹಬ್ಬ, ರಾಜಕೀಯ ಸಮಾವೇಶ, ಧಾರ್ಮಿಕ ಸಭೆಗಳ ಮೇಲಿನ ನಿಷೇಧ ಅ. 31ರ ವರೆಗೆ ವಿಸ್ತರಣೆ
ತಮಿಳುನಾಡಿನಲ್ಲಿ ಹಬ್ಬಗಳು, ರಾಜಕೀಯ ಸಮಾವೇಶ, ಸಮುದಾಯ ಮತ್ತು ಧಾರ್ಮಿಕ ಸಭೆ ಸಮಾರಂಭಗಳ ಮೇಲಿನ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ...

ಚೆನ್ನೈ: ತಮಿಳುನಾಡಿನಲ್ಲಿ ಹಬ್ಬಗಳು, ರಾಜಕೀಯ ಸಮಾವೇಶ, ಸಮುದಾಯ ಮತ್ತು ಧಾರ್ಮಿಕ ಸಭೆ ಸಮಾರಂಭಗಳ ಮೇಲಿನ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ಹೇಳಿದ್ದಾರೆ.
ನೆರೆಯ ರಾಜ್ಯ ಕೇರಳದಲ್ಲಿ ಕೊರೋನಾ ಸೋಂಕು ಹಾಗೂ ನಿಫಾ ವೈರಸ್ ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿಷೇಧ ಹೇರಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.
ಇದನ್ನು ಓದಿ: ತಮಿಳುನಾಡಿನಲ್ಲಿ 1,544 ಹೊಸ ಕೊರೋನಾ ಪ್ರಕರಣ, 19 ಸಾವು
ರಾಜ್ಯದಲ್ಲಿ ಕೊರೋನಾ ಮೂರನೆ ಅಲೆಯನ್ನು ತಡೆಗಟ್ಟಲು ಜನ ತಮ್ಮ ತಮ್ಮ ಮನೆಗಳಲ್ಲಿ ಹಬ್ಬಗಳನ್ನು ಆಚರಿಸಬೇಕು ಎಂದು ಸಿಎಂ ಸ್ಟಾಲಿನ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಬುಧವಾರ 1,587 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ದೈನಂದಿನ ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳ ಖಂಡಿದೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26,27,365 ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


