ಭವಾನಿಪುರ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸಿಎಂ ಮಮತಾ, ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಸ್ಪರ್ಧೆ

ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದು ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಸ್ಪರ್ಧಿಸಲಿದ್ದಾರೆ.
ಪ್ರಿಯಾಂಕಾ-ಮಮತಾ ಬ್ಯಾನರ್ಜಿ
ಪ್ರಿಯಾಂಕಾ-ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದು ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಸ್ಪರ್ಧಿಸಲಿದ್ದಾರೆ.

ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಎಡರಂಗದ ಶ್ರೀಜಿಬ್ ಬಿಸ್ವಾಸ್ ವಿರುದ್ಧ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ. ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.

ನಂದಿಗ್ರಾಮ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. 

ಬ್ಯಾನರ್ಜಿ ಭವಾನಿಪುರದ ನಿವಾಸಿಯಾಗಿದ್ದು, 2011 ಮತ್ತು 2016ರಲ್ಲಿ ಎರಡು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. 

ಈ ವರ್ಷದ ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಬಿಜೆಪಿ ನಾಯಕ ಮತ್ತು ಅವರ ಮಾಜಿ ಆಪ್ತರಾದ ಸುವೇಂದು ಅಧಿಕಾರಿಯ ವಿರುದ್ಧ ಮಮತಾ ಸೋತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com