ವಿಜಯ್ ರೂಪಾನಿ ಸ್ವಯಂ ಪ್ರೇರಣೆಯಿಂದ ರಾಜೀನಾಮೆ, ಯಾವುದೇ ಒತ್ತಡವಿಲ್ಲ- ನಿತಿನ್ ಪಟೇಲ್ 

ವಿಜಯ್ ರೂಪಾಯಿ ಸ್ವಯಂ ಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಒತ್ತಡದಿಂದಾಗಿ ಈ ನಿರ್ಧಾರವನ್ನು ಅವರು ಕೈಗೊಂಡಿಲ್ಲ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.
ನಿತಿನ್ ಪಟೇಲ್
ನಿತಿನ್ ಪಟೇಲ್

ಅಹಮದಾಬಾದ್: ವಿಜಯ್ ರೂಪಾಯಿ ಸ್ವಯಂ ಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಒತ್ತಡದಿಂದಾಗಿ ಈ ನಿರ್ಧಾರವನ್ನು ಅವರು ಕೈಗೊಂಡಿಲ್ಲ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.

ಗುಜರಾತ್ ನಲ್ಲಿ ಯಾರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ಕಳುಹಿಸಿರುವ ವೀಕ್ಷಕರು ಹಿರಿಯ ಬಿಜೆಪಿ ನಾಯಕರ ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ನಿತಿನ್ ಪಟೇಲ್ ಸೇರಿದಂತೆ ಐವರು ಪಾಟಿದಾರರು ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಈ ಮಧ್ಯೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಸಿಎಂ ಆಯ್ಕೆಗೆ ವೀಕ್ಷಕರೆಂದು ನೇಮಕ ಮಾಡಲಾಗಿದ್ದು ಭಾನುವಾರ ಗುಜರಾತ್ ಗೆ ತಲುಪಿದ್ದಾರೆ.

ಇತ್ತೀಚಿಗೆ ಕೇಂದ್ರ ಸಂಪುಟ ಸೇರಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರು ಕೂಡಾ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಗುಜರಾತ್ ಗೆ ಆಗಮಿಸಿದ್ದಾರೆ. 

ಅಪರಾಹ್ನ 3 ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸಿ ಆರ್ ಪಟೇಲ್, ನಿತಿನ್ ರೂಪಾನಿ ಕೂಡಾ ಭಾಗವಹಿಸುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com