ಸಾಂದರ್ಭಿಕ ಚಿತ್ರ
ದೇಶ
ದೇಶದಲ್ಲಿ 75 ಕೋಟಿ ಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಿಕೆ: ಕೇಂದ್ರ ಸರ್ಕಾರ
ದೇಶದಲ್ಲಿ 75 ಕೋಟಿ ಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಸೋಮವಾರ ಹೇಳಿದ್ದಾರೆ.
ನವದೆಹಲಿ: ದೇಶದಲ್ಲಿ 75 ಕೋಟಿ ಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಸೋಮವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಅವರ ಸಬ್ ಕಾ ಸಾಥ್, ಸಾಬ್ ಕಾ ಪ್ರಯಾಸ್ ಮಂತ್ರದೊಂದಿಗೆ ದೇಶದ ಲಸಿಕಾ ಅಭಿಯಾನದಲ್ಲಿ ಹೊಸ ಆಯಾಮ ಸೃಷ್ಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
75 ನೇ ವರ್ಷದ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ದೇಶದಲ್ಲಿ 75 ಕೋಟಿ ಲಸಿಕೆ ನೀಡಲಾಗಿದೆ. ಈ ವರೆಗೂ ಸಿಕ್ಕಿಂ, ಹಿಮಾಚಲ ಪ್ರದೇಶ, ಗೋವಾ, ದಾದ್ರಾ ಮತ್ತು ನಾಗರ್, ಹವೇಲಿ, ಲಡಾಖ್ ಮತ್ತು ಲಕ್ಷದ್ವೀಪದಲ್ಲಿ ಎಲ್ಲಾ ವಯಸ್ಕರಿಗೆ ಮೊದಲ ಡೋಸ್ ನೀಡಲಾಗಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ