ಸಾಂದರ್ಭಿಕ ಚಿತ್ರ
ದೇಶ
ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: 42 ವರ್ಷದ ವ್ಯಕ್ತಿಯ ಬಂಧನ
ನೆರೆಯ ಮನೆಯ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮುಂಬೈಯ ಪೂರ್ವ ಹೊರವಲಯದ ಜೋಗೇಶ್ವರದಲ್ಲಿ 42 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ: ನೆರೆಯ ಮನೆಯ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮುಂಬೈಯ ಪೂರ್ವ ಹೊರವಲಯದ ಜೋಗೇಶ್ವರದಲ್ಲಿ 42 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೋಗೇಶ್ವದ ಕಸಮ್ ನಗರದಲ್ಲಿ ವಾಸಿಸುತ್ತಿದ್ದ ಆರೋಪಿಯನ್ನು ಇಂದು ಬೆಳಗ್ಗೆ ಬಂಧಿಸಲಾಗಿದೆ ಎಂದು ಅಂಬೊಲಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಸೋಮೇಶ್ವರ್ ಕಾಮ್ಟೆ ಹೇಳಿದ್ದಾರೆ.
ಕಳೆದ ವಾರ ಆರೋಪಿ ತನ್ನ ಗುಡಿಸಿಲಿಗೆ ಆಟವಾಡಲು ಬಂದ ಐದು ವರ್ಷದ ಬಾಲಕಿಯ ಬಟ್ಟೆ ತೆಗೆದು ಕಿರುಕುಳ ನೀಡಿರುವುದಾಗಿ ಸಂತ್ರಸ್ತ ಬಾಲಕಿಯ ತಾಯಿ ಬುಧವಾರ ದಾಖಲಿಸಿರುವ ದೂರಿನಲ್ಲಿ ಆರೋಪಿಸಿರುವುದಾಗಿ ಕಾಮ್ಟೆ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ) ಮತ್ತು ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ