ಪ್ರಧಾನಿ ಮೋದಿ ಜನ್ಮದಿನದಂದು ದಾಖಲೆಯ 2 ಕೋಟಿ ಮಂದಿಗೆ ಕೋವಿಡ್ ಲಸಿಕೆ

ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

"ಪ್ರಧಾನಿ ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು.

ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು, ಭಾರತವು ಒಂದೇ ದಿನದಲ್ಲಿ ಎರಡು ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ’ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೋ-ವಿನ್ ಪೋರ್ಟಲ್‌ನ ಮಾಹಿತಿಯ ಪ್ರಕಾರ, ಶುಕ್ರವಾರ ಸಂಜೆ 5.27ರ ವರೆಗೆ ದೇಶದಲ್ಲಿ 2,03,68,343 ಲಸಿಕೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಸಂಖ್ಯೆ 78.72 ಕೋಟಿ ಡೋಸ್ ತಲುಪಿದೆ.

ಇದಕ್ಕು ಮುನ್ನ ಭಾರತೀಯ ಜನತಾ ಪಕ್ಷ(ಬಿಜೆಪಿ) ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು ದೇಶದಲ್ಲಿ ಗರಿಷ್ಠ ಸಂಖ್ಯೆಯ ಕೋವಿಡ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆ ಸೃಷ್ಟಿಸುವುದಾಗಿ ಹೇಳಿತ್ತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com