ಮುಂಬೈ: ಅಶ್ಲೀಲ ಚಿತ್ರ ಪ್ರಕರಣ ಸಂಬಂಧ ಎರಡು ತಿಂಗಳ ಹಿಂದೆ ಬಂಧಿತನಾಗಿದ್ದ ಉದ್ಯಮಿ ಮತ್ತು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.
ಕುಂದ್ರಾ ಮತ್ತು ಅವರ ಸಹವರ್ತಿ ರಯಾನ್ ಥೋರ್ಪೆರನ್ನು ಜುಲೈನಲ್ಲಿ ಬಂಧಿಸಲಾಗಿದ್ದು ಆತನಿಗೆ ನ್ಯಾಯಾಲಯವು ಆತನಿಗೆ ಜಾಮೀನು ನೀಡಿದೆ.
46 ವರ್ಷದ ಕುಂದ್ರಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ನಲ್ಲಿ ಆತನ ವಿರುದ್ಧ ಒಂದೇ ಒಂದು ಸಾಕ್ಷ್ಯವೂ ಇಲ್ಲ ಎಂದು ಹೇಳಿದ್ದರು.
ಅಶ್ಲೀಲ ಚಿತ್ರಗಳ ನಿರ್ಮಾಣದಲ್ಲಿ 'ಸಕ್ರಿಯವಾಗಿ' ಭಾಗಿಯಾಗಿದ್ದ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಪ್ರಕರಣದಲ್ಲಿ ತನ್ನನ್ನು 'ಬಲಿಪಶು' ಮಾಡಲಾಗಿದೆ ಎಂದು ಕುಂದ್ರಾ ಹೇಳಿಕೊಂಡಿದ್ದಾನೆ.
ಅಶ್ಲೀಲ ಚಿತ್ರ ಪ್ರಕರಣದಲ್ಲಿ ಕುಂದ್ರಾ 'ಮುಖ್ಯ ಸಂಚಾಲಕ' ಎಂದು ಅಪರಾಧ ವಿಭಾಗದ ಆಸ್ತಿ ಸೆಲ್ ನಡೆಸಿದ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ತಾಂತ್ರಿಕ ವಿಶ್ಲೇಷಣೆ, ಸಾಕ್ಷಿಗಳ ಹೇಳಿಕೆಗಳು ಮತ್ತು ಅವರ ಕಚೇರಿಯಿಂದ ವಶಪಡಿಸಿಕೊಂಡ ದಾಖಲೆಗಳಿಂದ ಕುಂದ್ರಾ ವಿರುದ್ಧ ಸಾಕಷ್ಟು ಪುರಾವೆಗಳು ಬೆಳಕಿಗೆ ಬಂದಿವೆ ಎಂದು ಹೇಳಿದೆ.
Advertisement