ಮಹಾರಾಷ್ಟ್ರ: ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಬಂಧನ
ಸತಾರ: ಮಹಾರಾಷ್ಟ್ರದ ಸತಾರ ಜಿಲ್ಲೆಯ ಕರಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಮುಂಜಾನೆ ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಅವರನ್ನು ಬಂಧಿಸಲಾಗಿದೆ. ಸೋಮಯ್ಯ ಇಂದು ಕೊಲ್ಹಾಪುರಕ್ಕೆ ಭೇಟಿ ನೀಡಬೇಕಿತ್ತು. ರೈಲ್ವಿನ ಮೂಲಕ ಕೊಲ್ಹಾಪುರಕ್ಕೆ ತೆರಳುವಾಗ ಬಂಧಿಸಲಾಗಿದೆ.
ಸೋಮಯ್ಯ ಕೊಲ್ಹಾಪುರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿಷೇಧ ಆದೇಶ ಹೊರಡಿಸಿದ್ದರು. ಅಲ್ಲದೇ, ಇಂದು ಮತ್ತು ನಾಳೆ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು. ತನ್ನನ್ನು ಮುಂಬೈನ ನಿವಾಸದಲ್ಲಿ ಬಂಧಿಸಲಾಗಿದೆ ಎಂದು ಬಿಜೆಪಿ ನಾಯಕ ಭಾನುವಾರ ಆರೋಪಿಸಿದ್ದರು.
ಕೊಲ್ಹಾಪುರಕ್ಕೆ ಹೋಗುವ ಮಾರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮತ್ತು ಮುಂಬೈಯಿಂದ ಹೊರಗೆ ಹೋಗದಂತೆ ನಿರ್ಬಂಧಿಸುವ ಆದೇಶಗಳನ್ನು ಯಾರು ನೀಡುತ್ತಾರೆ ಎಂದು ಪ್ರಶ್ನಿಸಿದರು.
ಮಹಾರಾಷ್ಟ್ರ ಸಚಿವ ಹಸನ್ ಮುಶ್ರಿಫ್ ಒಡೆತನದ ಆಸ್ತಿ ಇರುವ ಜಾಗಗಳಿಗೆ ಭೇಟಿ ನೀಡಬೇಕಿತ್ತು. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಅವರು ಹೇಳಿಕೆ ನೀಡಿದ್ದರು. ಈ ಹಿಂದೆ ಮಹಾರಾಷ್ಟ್ರದ ಕ್ಯಾಬಿನೆಟ್ ಮಂತ್ರಿಗಳಾದ ಚಗನ್ ಭುಜ್ಬಲ್ ಮತ್ತು ಅನಿಲ್ ಪರಬ್ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ಸೋಮಯ್ಯ ಮಾಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ