ನೇಮಕಾತಿ ಮುಂದೂಡಲು ಸಾಧ್ಯವಿಲ್ಲ, ಮಹಿಳೆಯರಿಗೆ ಈ ವರ್ಷವೇ 'ಎನ್'ಡಿಎ' ಪರೀಕ್ಷೆ ಬರೆಯಲು ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಮುಂದಿನ ವರ್ಷದಿಂದ ಮಹಿಳಾ ಅಭ್ಯರ್ಥಿಗಳು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ. 
ಭಾರತೀಯ ಸೇನಾಪಡೆ ಮಹಿಳಾ ಅಧಿಕಾರಿಗಳು
ಭಾರತೀಯ ಸೇನಾಪಡೆ ಮಹಿಳಾ ಅಧಿಕಾರಿಗಳು
Updated on

ನವದೆಹಲಿ: ಮುಂದಿನ ವರ್ಷದಿಂದ ಮಹಿಳಾ ಅಭ್ಯರ್ಥಿಗಳು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ. 

ಪರೀಕ್ಷೆ ಸಂಬಂಧ ಕುಶ್ ಕಲ್ರಾ ಎಂಬುವವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿ, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಚಿನ್ಮಯ್ ಪ್ರದೀಪ್ ಶರ್ಮಾ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು. 

ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಸ್ ಕೆ ಕೌಲ್ ನೇತೃತ್ವದ ಪೀಠ, ಮೇ 2022 ರಲ್ಲಿ ಪರೀಕ್ಷೆಗೆ ಹಾಜರಾದರೆ ಜೂನ್ 2023 ರಲ್ಲಿ ಪ್ರವೇಶಾತಿ ನಡೆಯುತ್ತದೆ. ನಾವು ಒಂದು ವರ್ಷದವರೆಗೆ ವಿಳಂಬ ಮಾಡಲು ಸಾಧ್ಯವಿಲ್ಲ. ನಾವು ಹುಡುಗಿಯರಿಗೆ ಭರವಸೆ ನೀಡಿದ್ದೇವೆ. ನಾವು ಈಗ ಆ ಭರವಸೆಯನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ, ಈ ವರ್ಷವೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಆದೇಶಿಸಿದೆ. 

ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಶಸ್ತ್ರ ಪಡೆಗಳು ಅತ್ಯುತ್ತಮ ಪ್ರತಿಕ್ರಿಯಾ ತಂಡವಾಗಿದ್ದು, ಎನ್‌ಡಿಎಯಲ್ಲಿ ವಿಳಂಬವಿಲ್ಲದೆ ಮಹಿಳೆಯರ ಸೇರ್ಪಡೆಗೆ ಹಾದಿ ಸುಗಮಗೊಳಿಸಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಆಶಿಸುತ್ತೇವೆ. ಇದಕ್ಕಾಗಿ ಯುಪಿಎಸ್‌ಸಿ ಸಹಯೋಗದೊಂದಿಗೆ ರಕ್ಷಣಾ ಇಲಾಖೆಯಿಂದ ಅಗತ್ಯವಾದ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದೆ. 

ಸಮಸ್ಯೆಗಳು ಅರ್ಥವಾಗುತ್ತದೆ. ಆದರೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ನಿಮಗಿದೆ. ಫಲಿತಾಂಶಗಳನ್ನು ನೋಡಿ, ಯೋಜನೆ ಮುಂದುವರೆಸುವ ಕುರಿತು ನಿರ್ಧಾರ ಕೈಗೊಳ್ಳಬಹುದು. ಆಕಾಂಕ್ಷಿಗಳೇ ಪರೀಕ್ಷೆ ಬರೆಯಲು ಮುಂದೆ ಬರುತ್ತಿರುವಾಗ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ಮನವಿಯನ್ನು ಪರಿಗಣಿಸುವುದು ಕಷ್ಟವಾಗುತ್ತದೆ,

ಸಶಸ್ತ್ರ ಸೇವೆಗಳು ಅತ್ಯಂತ ಕಷ್ಟಕರ ಸನ್ನಿವೇಶಗಳನ್ನು ನಿಭಾಯಿಸಿವೆ. ತುರ್ತುಪರಿಸ್ಥಿತಿಗಳನ್ನು ಎದುರಿಸುವುದು ಅವರ ತರಬೇತಿಯ ಒಂದು ಭಾಗವಾಗಿದೆ. ಹೀಗಾಗಿ ಈಗಾಗಲೇ ನೀಡಲಾಗಿರುವ ಆದೇಶವನ್ನು ಹಿಂಪಡೆಯುವುದು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com