ಜಾರ್ಖಂಡ್: ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ವಿದೇಶಿ ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಸ್ಕಾಲರ್ ಶಿಪ್ ಜಾರಿ

ಅಯ್ಕೆಯಾದ ಅಭ್ಯರ್ಥಿಗಳು ಈ ಸ್ಕಾಲರ್ ಶಿಪ್ ಸಹಾಯದಿಂದ ಇಂಗ್ಲೆಂಡ್ ಮತ್ತು ಐರ್ಲೆಂಡ್ ದೇಶಗಳಲ್ಲಿನ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಪಡೆದುಕೊಳ್ಳಬಹುದಾಗಿದೆ.
ಆಕ್ಸ್ ಫರ್ಡ್ ಯೂನಿವರ್ಸಿಟಿ
ಆಕ್ಸ್ ಫರ್ಡ್ ಯೂನಿವರ್ಸಿಟಿ
Updated on

ರಾಂಚಿ: ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ವಿದೇಶಿ ಉನ್ನತ ಶಿಕ್ಷಣಕ್ಕಾಗಿ ಜಾರ್ಖಂಡ್ ರಾಜ್ಯ ಸರ್ಕಾರ ಸ್ಕಾಲರ್ ಶಿಪ್ ಯೋಜನೆ ಜಾರಿಗೊಳಿಸಿದೆ. ಅದರ ಪ್ರಕಾರ ವರ್ಷಕ್ಕೆ 10 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. 

ಈ ನೂತನ ವಿದ್ಯಾರ್ಥಿವೇತನ ಯೋಜನೆಗೆ ಮರಂಗ್ ಗೋಮ್ಕೆ ಜೈಪಾಲ್ ಸಿಂಗ್ ಮುಂಡಾ ಎಂದು ನಾಮಕರಣ ಮಾಡಿದ್ದು, ರಾಜ್ಯದಯ ಎಸ್ ಟಿ ವರ್ಗಕ್ಕೆ ಸೇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 

ಅಯ್ಕೆಯಾದ ಅಭ್ಯರ್ಥಿಗಳು ಈ ಸ್ಕಾಲರ್ ಶಿಪ್ ಸಹಾಯದಿಂದ ಇಂಗ್ಲೆಂಡ್ ಮತ್ತು ಐರ್ಲೆಂಡ್ ದೇಶಗಳಲ್ಲಿನ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಪಡೆದುಕೊಳ್ಳಬಹುದಾಗಿದೆ.

ಕಳೆದ ವರ್ಷವೇ ಈ ಯೋಜನೆಯ ರೂಪುರೇಷೆ ಸಿದ್ಧವಾಗಿತ್ತು. ಈ ವರ್ಷದ ಮಾರ್ಚ್ ತಿಂಗಳಲ್ಲಿ ಸ್ವೀಕೃತ ಅರ್ಜಿಗಳಲ್ಲಿ 6 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಇದೀಗ ಈ ಯೋಜನೆಯಡಿ 6 ಮಂದಿ ವಿದ್ಯಾರ್ಥಿಗಳು ಇಂಗ್ಲೆಂಡಿನ 5 ವಿವಿಧ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com