ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ: ಬಿಜೆಪಿ ಕಾರ್ಯಕರ್ತನ ವಿರುದ್ಧ ಎಫ್ಐಆರ್

ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಿಜೆಪಿ ಕಾರ್ಯಕರ್ತನೋರ್ವನ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮುಂಬೈ ನಲ್ಲಿ ವರದಿಯಾಗಿದೆ. 
ಲೈಂಗಿಕ ಕಿರುಕುಳ (ಸಾಂಕೇತಿಕ ಚಿತ್ರ)
ಲೈಂಗಿಕ ಕಿರುಕುಳ (ಸಾಂಕೇತಿಕ ಚಿತ್ರ)
Updated on: 

ಮುಂಬೈ: ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಿಜೆಪಿ ಕಾರ್ಯಕರ್ತನೋರ್ವನ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮುಂಬೈ ನಲ್ಲಿ ವರದಿಯಾಗಿದೆ. 

ಸೆ.22 ರಂದು ಈ ಘಟನೆ ವರದಿಯಾಗಿದೆ. ದೂರು ನೀಡಿರುವ ಮಹಿಳೆಯ ಪ್ರಕಾರ ಆಕೆ ಕಳೆದ ವರ್ಷ ಪಕ್ಷಕ್ಕೆ ಸೇರ್ಪಡೆಯಾಗುವುದಕ್ಕೆ ಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ. 

ಬಿಜೆಪಿಯ ಸದಸ್ಯರಾಗುವುದಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದ ಆರೋಪಿ, ಬೊರಿವಲಿಯ ಪಕ್ಷದ ಕಾರ್ಪೊರೇಟರ್ ನ ಕಚೇರಿಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ) ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಯಾರನ್ನೂ ಬಂಧಿಸಲಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com