ಕೋವಿಡ್: ಅಕ್ಟೋಬರ್ 22 ರಿಂದ ಮಹಾರಾಷ್ಟ್ರದಲ್ಲಿ ಚಿತ್ರಮಂದಿರ, ನಾಟಕ ಥಿಯೇಟರ್‌ಗಳು ಪುನರಾರಂಭ

ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುವ ಷರತ್ತಿನ ಮೇಲೆ ಅಕ್ಟೋಬರ್ 22 ರಿಂದ ರಾಜ್ಯದಲ್ಲಿ ಚಿತ್ರಮಂದಿರಗಳು ಮತ್ತು ನಾಟಕ ಥಿಯೇಟರ್‌ಗಳನ್ನು ಪುನರಾರಂಭಿಸಲು ಅನುಮತಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬೈ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುವ ಷರತ್ತಿನ ಮೇಲೆ ಅಕ್ಟೋಬರ್ 22 ರಿಂದ ರಾಜ್ಯದಲ್ಲಿ ಚಿತ್ರಮಂದಿರಗಳು ಮತ್ತು ನಾಟಕ ಥಿಯೇಟರ್‌ಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಕೋವಿಡ್ ಮಾರ್ಗಸೂಚಿ(ಎಸ್ಒಪಿ) ಗಳನ್ನು ಬಿಡುಗಡೆ ಮಾಡಲಿದೆ ಎಂದು ಸಿಎಂ ಠಾಕ್ರೆ ತಿಳಿಸಿದ್ದಾರೆ.

ಕೋವಿಡ್ -19 ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಠಾಕ್ರೆ, ಎಲ್ಲಾ ಕೋವಿಡ್ -19 ಸಂಬಂಧಿತ ಆರೋಗ್ಯ ಪ್ರೋಟೋಕಾಲ್‌ಗಳನ್ನು ಅನುಸರಿಸಿದರೆ, ಅಕ್ಟೋಬರ್ 22ರಿಂದ ಚಿತ್ರಮಂದಿರಗಳು ಮತ್ತು ನಾಟಕ ಥಿಯೇಟರ್‌ಗಳು ಕಾರ್ಯನಿರ್ವಹಿಸಲು ಅನುಮತಿಸಲಾಗುವುದು ಎಂದು ಘೋಷಿಸಿದರು.

ನಿನ್ನೆಯಷ್ಟೇ ಮಹಾರಾಷ್ಟ್ರ ಸರ್ಕಾರ ಅಕ್ಟೋಬರ್ 7 ರಿಂದ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಪುನಃ ತೆರೆಯುವುದಾಗಿ ಘೋಷಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com