ಹೊರಗಿನವರಾದ ಸಿಧುವಿಗೆ ಉನ್ನತ ಸ್ಥಾನ ಕೊಟ್ಟಿದ್ದು ದೊಡ್ಡ ತಪ್ಪು: ಕಾಂಗ್ರೆಸ್ ನಾಯಕರ ಪಶ್ಚಾತ್ತಾಪ
ನವದೆಹಲಿ: ಪಂಜಾಬ್ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವ್ ಜೋತ್ ಸಿಂಗ್ ಸಿಧು ರಾಜಿನಾಮೆ ನೀಡಿದ ಬೆನ್ನಲ್ಲೇ ಸಿಧುವನ್ನು ಪಕ್ಷದ ಉನ್ನತ ಸ್ಥಾನಕ್ಕೆ ನೇಮಿಸಿದ್ದು ಎಂದು ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ.
ಮೊದಲು ಸಿಧು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಬೇಕಿತ್ತು, ಪಕ್ಷದ ಸಿದ್ಧಾಂತ ಕಾರ್ಯವೈಖರಿಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ನಂತರ ಅವರಿಗೆ ಉನ್ನತ ಸ್ಥಾನ ನೀಡಿದರೆ ಅದರಲ್ಲಿ ಅರ್ಥವಿರುತ್ತಿತ್ತು. ಆದರೆ ಏಕಾಏಕಿ ಅವರನ್ನು ಉನ್ನತ ಸ್ಥಾನಕ್ಕೆ ತಂದು ಕೂರಿಸಿದ್ದು ತಪ್ಪು ಎಂಡು ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಸಿಧು ಬಿಜೆಪಿಯಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟು ಸೋತಿದ್ದರು. ಆತ ಆಪ್ ಪಕ್ಷದ ಜೊತೆಗೂ ಮಾತುಕತೆ ನಡೆಸಿದ್ದರು. ಅಂಥಾ ಸಮಯದಲ್ಲಿ ಅಮರಿಂದರ್ ಸಿಂಗ್ ಅವರನ್ನು ಬದಿಗೊತ್ತಿ ಸಿಧು ಅವರನ್ನು ಕಾಂಗ್ರೆಸ್ ಉನ್ನತ ಸ್ಥಾನಕ್ಕೆ ನೇಮಿಸಿದ್ದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನಿಸಿದಂತಾಗುತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಲಾಲ್ ಬಹದೂರ್ ಶಾಸ್ತ್ರಿ ಮೊಮ್ಮಗ, ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಸಲಹೆಗಾರ ವಿಭಾಕರ್ ಶಾಸ್ತ್ರಿ ಕೂಡಾ ಈ ಮಾತಿಗೆ ಸಹಮತ ಸೂಚಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ