ಪಂಜಾಬ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಕೇಜ್ರಿವಾಲ್ ಭರವಸೆ

ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಉತ್ತಮ ಚಿಕಿತ್ಸೆ ನೀಡುವುದಾಗಿ...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ಲುಧಿಯಾನಾ: ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಉತ್ತಮ ಚಿಕಿತ್ಸೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ.

ಎರಡು ದಿನಗಳ ಪಂಜಾಬ್ ಪ್ರವಾಸದಲ್ಲಿರುವ ಕೇಜ್ರಿವಾಲ್ ಅವರು ಇಂದು ಲುಧಿಯಾನಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. "ಇಂದು, ನಾನು ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಗ್ಯಾರಂಟಿ ನೀಡಲು ಬಂದಿದ್ದೇನೆ" ಎಂದು ಹೇಳಿದರು. ಅಲ್ಲದೆ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ "ಆರು ಭರವಸೆಗಳನ್ನು" ನೀಡಿದರು. ಆಮ್ ಆದ್ಮಿ ಪಕ್ಷ(ಎಎಪಿ) ಅಧಿಕಾರಕ್ಕೆ ಬಂದರೆ ಇವುಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದರು.

"ಪಂಜಾಬ್‌ನ ಸರ್ಕಾರಿ ಆಸ್ಪತ್ರೆಗಳಲ್ಲಿನ ಸ್ಥಿತಿ ತುಂಬಾ ಕೆಟ್ಟದಾಗಿದ್ದು, ಜನರು ಖಾಸಗಿ ಸೌಲಭ್ಯಗಳಿಗೆ ಹೋಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಲೂಟಿ ಮಾಡಲಾಗುತ್ತಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಔಷಧಿ ಲಭ್ಯತೆ ಇಲ್ಲ. ವೈದ್ಯರ ಲಭ್ಯತೆ ಇಲ್ಲ ಮತ್ತು ವೈದ್ಯಕೀಯ ಉಪಕರಣಗಳಿಲ್ಲದೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು.

"ನಾವು ದೆಹಲಿಯ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿಯನ್ನು ಬದಲಾಯಿಸಿದ್ದೇವೆ. ನಾಗರಿಕರ ಆರೋಗ್ಯಕ್ಕಾಗಿ ನಾನು ಆರು ಖಾತರಿಗಳನ್ನು ನೀಡುತ್ತಿದ್ದೇನೆ. ಪಂಜಾಬ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆ ನೀಡುತ್ತೇವೆ. ಇದು ಖಾಸಗಿ ಆಸ್ಪತ್ರೆಗಳಿಗೆ ಸಮನಾಗಿರುತ್ತದೆ, ಎಲ್ಲಾ ಔಷಧಗಳು, ಪರೀಕ್ಷೆಗಳು ಮತ್ತು ಆಪರೇಷನ್ ಗಳು ಸಹ ಉಚಿತ ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯ ಮೊಹಲ್ಲಾ ಕ್ಲಿನಿಕ್ ಗಳಂತೆ, ಪಂಜಾಬ್ ನಲ್ಲಿ "ಪಿಂಡ್ ಕ್ಲಿನಿಕ್" ಗಳನ್ನು ಆರಂಭಿಸಲಾಗುವುದು. ಅಂತಹ 16,000 ಕ್ಲಿನಿಕ್ ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com