ಕೋವಿಡ್-19: ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಶೇ.84.61ರಷ್ಟು ಹೊಸ ಪಾಸಿಟಿವ್ ಪ್ರಕರಣ

ಮಹಾರಾಷ್ಟ್ರ, ಛತ್ತೀಸ್ಗಢ, ಕರ್ನಾಟಕ, ಪಂಜಾಬ್ ಮತ್ತು ಮಧ್ಯಪ್ರದೇಶ ಸೇರಿದಂತೆ 8 ರಾಜ್ಯಗಳಲ್ಲಿ ಕೋವಿಡ್‌-19 ಪ್ರಕರಣಗಳ ಗಣನೀಯ ಏರಿಕೆ ಕಾಣುತ್ತಿದ್ದು, ಈ ರಾಜ್ಯಗಳಲ್ಲಿ ಗುರುವಾರ ಶೇ. 84.61ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Published: 01st April 2021 11:58 AM  |   Last Updated: 01st April 2021 12:34 PM   |  A+A-


file photo

ಸಂಗ್ರಹ ಚಿತ್ರ

Posted By : Manjula VN

ನವದೆಹಲಿ: ಮಹಾರಾಷ್ಟ್ರ, ಛತ್ತೀಸ್ಗಢ, ಕರ್ನಾಟಕ, ಪಂಜಾಬ್ ಮತ್ತು ಮಧ್ಯಪ್ರದೇಶ ಸೇರಿದಂತೆ 8 ರಾಜ್ಯಗಳಲ್ಲಿ ಕೋವಿಡ್‌-19 ಪ್ರಕರಣಗಳ ಗಣನೀಯ ಏರಿಕೆ ಕಾಣುತ್ತಿದ್ದು, ಈ ರಾಜ್ಯಗಳಲ್ಲಿ ಗುರುವಾರ ಶೇ. 84.61ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಹಾರಾಷ್ಟ್ರ, ಛತ್ತೀಸ್ಗಢ, ಪಂಜಾಬ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ತಮಿಳುನಾಡು ಮತ್ತು ಗುಜರಾತ್ ನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಶೇಕಡಾ 84.61ರಷ್ಟು ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 72,330 ಹೊಸ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,22,21,665ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ನಿನ್ನೆ ಅತಿ ಹೆಚ್ಚು ಅಂದರೆ 39,544 ಪ್ರಕರಣಗಳು ವರದಿಯಾಗಿದ್ದು, ಇದರ ನಂತರ ಪಂಜಾಬ್ ನಲ್ಲಿ  2,210 ಹಾಗೂ ಕರ್ನಾಟಕದಲ್ಲಿ 4225 ಹೊಸ ಪ್ರಕರಣಗಳು ದಾಖಲಾಗಿವೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp