ಪಶ್ಚಿಮ ಬಂಗಾಳ: 2ನೇ ಹಂತದ ಮತದಾನ ಪ್ರಗತಿಯಲ್ಲಿ; ಟಿಎಂಸಿ ಕಾರ್ಯಕರ್ತನ ಬರ್ಬರ ಹತ್ಯೆ!

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿರುವಾಗಲೇ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ತೃಣಮೂಲಕ ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Published: 01st April 2021 09:32 AM  |   Last Updated: 01st April 2021 12:32 PM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಕೇಶ್ಪುರ: ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿರುವಾಗಲೇ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ತೃಣಮೂಲಕ ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಉತ್ತಮ ದುಲೋಯ್ (48) ಹತ್ಯೆಯಾದ ಟಿಎಂಸಿ ಕಾರ್ಯಕರ್ತನಾಗಿದ್ದಾನೆಂದು ವರದಿಗಳು ತಿಳಿಸಿವೆ. 

ಕೇಶ್ಪುರದ ಹರಿಹರ್ಪುರದ ಸ್ಥಳೀಯ ಕ್ಲಬ್ ನಲ್ಲಿ ಉತ್ತಮ್ ದುಲೋಯ್ ಇದ್ದರು. ಈ ವೇಳೆ 10-15 ಮಂದಿಯಿದ್ದ ತಂಡವೊಂದು ಏಕಾಏಕಿ ಉತ್ತಮ್ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ. 

ಗಂಭೀರವಾಗಿ ಗಾಯಗೊಂಡಿದ್ದ ಉತ್ತಮ್ ಅವರನ್ನು ಮಿಡ್ನಾಪುರದ ಆಸ್ಪತ್ರೆಗೆ ದಾಖಲಿಸಲು ಸ್ಥಳೀಯರು ಮುಂದಾಗಿದ್ದು, ಈ ವೇಳೆ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಟಿಎಂಪಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, ಆರೋಪವನ್ನು ಬಿಜೆಪಿ ನಿರಾಕರಿಸಿದೆ. ಕೇಶ್ಪುರದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ. ಹಿಂಸಾಚಾರ ಸೃಷ್ಟಿಸುವ ಯಾವುದೇ ಉದ್ದೇಶ ನಮಗಿಲ್ಲ ಎಂದು ಹೇಳಿದೆ. 

ಟಿಎಂಸಿ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಇದೀಗ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. 

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಜಿಲ್ಲಾ ಆಡಳಿತ ಮಂಡಳಿಯಿಂದ ವರದಿಯನ್ನು ಕೇಳಿದೆ. ಅಲ್ಲದೆ, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಭದ್ರತೆಯನ್ನು ಹೆಚ್ಚಿಸಿದೆ. 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp