ಪುಲ್ವಾಮಾ ಎನ್ಕೌಂಟರ್: ಭದ್ರತಾ ಪಡೆಗಳಿಂದ 3 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯ ಕಾಕಾಪೋರಾ ಪ್ರದೇಶದಲ್ಲಿ ಶುಕ್ರವಾರ ಭಾರತೀಯ ಸೇನಾಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

Published: 02nd April 2021 12:53 PM  |   Last Updated: 02nd April 2021 01:10 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯ ಕಾಕಾಪೋರಾ ಪ್ರದೇಶದಲ್ಲಿ ಶುಕ್ರವಾರ ಭಾರತೀಯ ಸೇನಾಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಕಾಕಾಪೋರಾದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಸ್ಥಳವನ್ನು ಸುತ್ತುವರೆದಿದ್ದ ಭದ್ರತಾ ಪಡೆಗಳು ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್'ಪಿಎಫ್ ಹಾಗೂ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಕೂಡಲೇ ಉಗ್ರರು ಪರಾರಿಯಾಗದಂತೆ ಸ್ಥಳವನ್ನು ಸುತ್ತುವರೆದು ಎನ್ಕೌಂಟರ್ ಆರಂಭಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕಾರ್ಯಾಚರಣೆ ಆರಂಭದಲ್ಲೇ ಉಗ್ರರಿಗೆ ಶರಣಾಗುವ ಅವಕಾಶ ನೀಡಲಾಗಿತ್ತು. ಆದರೆ, ಶರಣಾಗಲು ನಿರಾಕರಿಸಿದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಬಳಿಕ ಇದಕ್ಕೆ ದಿಟ್ಟ ಉತ್ತರ ನೀಡಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿಸಿದ್ದಾರೆ. 

ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರಿಂದ ಸ್ಫೋಟಕ ವಸ್ತುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ. 

ಪ್ರಸ್ತುತ ಹತ್ಯೆಯಾಗಿರುವ ಉಗ್ರರು ಈ ಹಿಂದೆ ನೌಗಾಮ್​ನಲ್ಲಿ ಬಿಜೆಪಿ ನಾಯಕರೊಬ್ಬರ ಮನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿ, ಅಲ್ಲಿ ಭದ್ರತೆಗಿದ್ದ ಪೊಲೀಸರನ್ನು ಹತ್ಯೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ. 


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp