ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ ಪ್ರಕರಣ: 4 ಅಧಿಕಾರಿಗಳು ಅಮಾನತು, ಮರು ಮತದಾನಕ್ಕೆ ಆದೇಶ

2ನೇ ಹಂತದ ಮತದಾನ ಮಾರನೇ ದಿನವೇ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ 4 ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಅಲ್ಲದೆ ಒಂದು ಕ್ಷೇತ್ರದಲ್ಲಿ ಮರು ಮತದಾನಕ್ಕೆ ಆದೇಶ ನೀಡಿದೆ.

Published: 02nd April 2021 02:33 PM  |   Last Updated: 02nd April 2021 02:33 PM   |  A+A-


EC-Assam

ಅಸ್ಸಾಂ ಇವಿಎಂ ವಿವಾದ

Posted By : Srinivasamurthy VN
Source : PTI

ನವದೆಹಲಿ: 2ನೇ ಹಂತದ ಮತದಾನ ಮಾರನೇ ದಿನವೇ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ 4 ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಅಲ್ಲದೆ ಒಂದು ಕ್ಷೇತ್ರದಲ್ಲಿ ಮರು ಮತದಾನಕ್ಕೆ ಆದೇಶ ನೀಡಿದೆ.

ಮೂಲಗಳ ಪ್ರಕಾರ, ಚುನಾವಣಾ ಆಯೋಗ ರತಬಾರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮರುಚುನಾವಣೆ ನಡೆಸಲು ಶುಕ್ರವಾರ ಆದೇಶಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, ಕರ್ತವ್ಯ ಲೋಪ ಆರೋಪದ ಮೇರೆಗೆ ಮತಗಟ್ಟೆ ಅಧಿಕಾರಿ ಮತ್ತು ಇತರೆ ಮೂವರು  ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ಇವಿಎಂಗಳಿಗೆ ಯಾವುದೇ ಹಾನಿಯಾಗದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಮತಗಟ್ಟೆ ಸಂಖ್ಯೆ 149ರಲ್ಲಿ ಮರುಮತದಾನ ನಡೆಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ.

'ಸಾರಿಗೆ ಶಿಷ್ಟಾಚಾರದ ಉಲ್ಲಂಘನೆಗಾಗಿ ಮತಗಟ್ಟೆ ಅಧಿಕಾರಿಗೆ ಷೊಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ. ಮತಗಟ್ಟೆ ಅಧಿಕಾರಿ ಮತ್ತು ಇತರೆ ಮೂವರು ಸಿಬ್ಬಂದಿಯನ್ನು ಅಮಾನತಿನಲ್ಲಿಡಲಾಗಿದೆ. ಇವಿಎಂಗಳಿಗೆ ಯಾವುದೇ ಹಾನಿಯಾಗದಿದ್ದರೂ, ಮತಗಟ್ಟ ಸಂಖ್ಯೆ 149ರಲ್ಲಿ ಮರುಮತದಾನ ನಡೆಸಲಾಗುತ್ತದೆ'  ಎಂದು ಚುನಾವಣಾ ಆಯೋಗ ಹೇಳಿದೆ.

ಏನಿದು ಘಟನೆ?
ಅಸ್ಸಾಂ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯವಾಗಿ ಕೆಲವೇ ಗಂಟೆಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಪತ್ತೆಯಾಗಿತ್ತು. ಅಸ್ಸಾಂ ಮೂಲದ ಪತ್ರಕರ್ತ ಅತಾನು ಭುಯಾನ್‌ ಇವಿಎಂಗಳಿರುವ ಕಾರಿನ ವಿಡಿಯೊ ಟ್ವೀಟಿಸಿದ್ದು, 'ಈ ಘಟನೆಯ ಬಳಿಕ ಪಥರ್‌ಕಾಂಡಿ  ಕ್ಷೇತ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ' ನಿರ್ಮಾಣವಾಗಿದೆ ಎಂದು ಹೇಳಿದ್ದರು. ಇವಿಎಂಗಳಿದ್ದ ಕಾರು (ಬೊಲೆರೊ) ಬಿಜೆಪಿ ಅಭ್ಯರ್ಥಿ ಕೃಷ್ಣೆಂದು ಪೌಲ್‌ ಅವರಿಗೆ ಸೇರಿದ್ದು ಎಂದು ಆರೋಪಿಸಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಬಿಜೆಪಿಯ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ್ದವು.

ಆದರೆ ಇದಕ್ಕೆ ಸ್ಪಷ್ಟನೆ ನೀಡಿದ್ದ ಸ್ಥಳೀಯ ಬಿಜೆಪಿ ಮುಖಂಡರು, ಮತಗಟ್ಟೆ ಅಧಿಕಾರಿಗಳು ಇವಿಎಂ ಯಂತ್ರಗಳನ್ನು ಅಧಿಕೃತ ವಾಹನದಲ್ಲಿ ಸಾಗಿಸುವಾಗ ಅವರ ಕಾರು ಮಾರ್ಗ ಮಧ್ಯೆ ಕೆಟ್ಟು ನಿಂತಿತ್ತು. ಹೀಗಾಗಿ ಹಿಂದೆ ಬರುತ್ತಿದ್ದ ವಾಹನದ ಸಹಾಯ ಕೋರಿ ಆ ವಾಹನದಲ್ಲಿ ಸಂಚಾರ ಮುಂದುವರಿಸಿದ್ದರು. ಮತಗಟ್ಟೆ  ಅಧಿಕಾರಿ ಮತ್ತು ಮೂವರು ಮತಗಟ್ಟೆ ಸಿಬ್ಬಂದಿ ಜೊತೆಗೆ ಪೊಲೀಸ್‌ ಕಾನ್‌ಸ್ಟೆಬಲ್‌ ಮತ್ತು ಹೋಂಗಾರ್ಡ್‌ ಕೂಡ ಕಾರಿನಲ್ಲಿ ಇದ್ದರು ಎಂದು ಹೇಳಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಮತ್ತು ಎಐಯುಡಿಎಫ್ ಬೆಂಬಲಿಗರು ಸ್ಥಳಕ್ಕೆ ಆಗಮಿಸಿದ್ದರಿಂದಾಗಿ ಹಿಂಸಾಚಾರ ಭುಗಿಲೆದ್ದಿತ್ತು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ  ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.

ಇದೀಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ, ಮತಗಟ್ಟೆ 149-ಇಂದಿರಾ ಎಂವಿ ಸ್ಕೂಲ್‌ ಎಲ್‌ಎಸಿ 1 ರತಾಬಾರಿ (ಎಸ್‌ಸಿ) ವಲಯದಲ್ಲಿ ನಿಯೋಜನೆಯಾಗಿದ್ದ ಅಧಿಕಾರಿಗಳು ಈ ಪ್ರಕರಣದಲ್ಲಿ ಅಮಾನತುಗೊಂಡಿದ್ದಾರೆ. ಅಲ್ಲದೆ ಇಲ್ಲಿ ಮರುಮತದಾನಕ್ಕೆ ಆದೇಶ ಕೂಡ  ನೀಡಲಾಗಿದೆ. 


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp