ಅಸ್ಸಾಂ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ; ಪ್ರಕರಣ ದಾಖಲು

ಅಸ್ಸಾಂ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯವಾಗಿ ಕೆಲವೇ ಗಂಟೆಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಪತ್ತೆಯಾಗಿದ್ದು, ಆಯೋಗ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದೆ.

Published: 02nd April 2021 12:09 PM  |   Last Updated: 02nd April 2021 12:12 PM   |  A+A-


BJP candidate carrying EVM

ಇವಿಎಂ ಸಾಗಿಸುತ್ತಿರುವ ಕಾರು

Posted By : Srinivasamurthy VN
Source : The New Indian Express

ನವದೆಹಲಿ: ಅಸ್ಸಾಂ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯವಾಗಿ ಕೆಲವೇ ಗಂಟೆಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಪತ್ತೆಯಾಗಿದ್ದು, ಆಯೋಗ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದೆ.

ಅಸ್ಸಾಂ ಮೂಲದ ಪತ್ರಕರ್ತ ಅತಾನು ಭುಯಾನ್‌ ಇವಿಎಂಗಳಿರುವ ಕಾರಿನ ವಿಡಿಯೊ ಟ್ವೀಟಿಸಿದ್ದು, 'ಈ ಘಟನೆಯ ಬಳಿಕ ಪಥರ್‌ಕಾಂಡಿ ಕ್ಷೇತ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ' ನಿರ್ಮಾಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಇವಿಎಂಗಳಿದ್ದ ಕಾರು (ಬೊಲೆರೊ) ಬಿಜೆಪಿ ಅಭ್ಯರ್ಥಿ ಕೃಷ್ಣೆಂದು ಪೌಲ್‌ ಅವರಿಗೆ ಸೇರಿದ್ದು ಎಂದು ಆರೋಪಿಸಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಬಿಜೆಪಿಯ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸುತ್ತಿವೆ. ಪ್ರಸ್ತುತ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದು ತನಿಖೆ  ನಡೆಸುತ್ತಿದ್ದಾರೆ.

ನಿರ್ಣಾಯಕ ಕ್ರಮ ಕೈಗೊಳ್ಳಿ: ಪ್ರಿಯಾಂಕಾ ಗಾಂಧಿ
ಇನ್ನು ಪ್ರತೀ ಚುನಾವಣೆಗಳಲ್ಲೂ ಇಂತಹ ದೃಶ್ಯಗಳು ಸಾಮಾನ್ಯವಾಗಿ ಬಿಟ್ಟಿವೆ. ಇವಿಎಂಗಳ ಬಳಕೆಗೆ ಸಂಬಂಧಿಸಿದಂತೆ ಎಲ್ಲ ರಾಷ್ಟ್ರೀಯ ಪಕ್ಷಗಳು ಮತ್ತೆ ಪರಿಶೀಲನೆ ನಡೆಸಬೇಕಾದ ಅಗತ್ಯವಿದೆ. ಇಂಥ ದೂರುಗಳ ಬಗ್ಗೆ ಚುನಾವಣಾ ಆಯೋಗ ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಕಾಂಗ್ರೆಸ್‌ ನಾಯಕಿ  ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಪ್ರತಿ ಬಾರಿಯೂ ಚುನಾವಣೆಯ ಸಂದರ್ಭದಲ್ಲಿ ಇವಿಎಂಗಳನ್ನು ಸಾಗಿಸುತ್ತಿರುವ ಖಾಸಗಿ ವಾಹನಗಳ ಕುರಿತು ವಿಡಿಯೊ ಲಭ್ಯವಾಗುತ್ತದೆ. ಅವುಗಳಲ್ಲಿ ಈ ಸಮಾನ ಅಂಶಗಳನ್ನು ಕಾಣಬಹುದಾಗಿರುತ್ತದೆ: 1. ಸೆರೆಹಿಡಿಯಲಾಗಿರುವ ವಿಡಿಯೊದಲ್ಲಿ ಕಾಣುವ ವಾಹನಗಳು  ಸಾಮಾನ್ಯವಾಗಿ ಬಿಜೆಪಿ ಅಭ್ಯರ್ಥಿ ಅಥವಾ ಅವರ ಸಹಚರರದ್ದಾಗಿರುತ್ತವೆ. 2. ಇಂಥ ಘಟನೆಗಳಿಗೆ ಸಂಬಂಧಿಸಿದ ವಿಡಿಯೊಗಳನ್ನು ನಿರ್ಲಕ್ಷಿಸಲಾಗುತ್ತದೆ. 3. ಸೋಲಿನ ಭಯದಿಂದ ವಿಡಿಯೊ ಬಹಿರಂಗ ಪಡಿಸಿದ್ದಾರೆ ಎಂದು ಬಿಜೆಪಿ ತನ್ನ ಮಾಧ್ಯಮಗಳ ಮೂಲಕ ಆರೋಪಿಸುತ್ತದೆ. ಇಂಥ ಹಲವು ಘಟನೆಗಳು  ವರದಿಯಾಗುತ್ತಿರುತ್ತವೆ, ಆದರೆ ಅವರ ಬಗ್ಗೆ ಯಾವುದೇ ಕ್ರಮಕೈಗೊಳ್ಳಲಾಗುತ್ತಿಲ್ಲ. ಈ ದೂರುಗಳ ಬಗ್ಗೆ ಚುನಾವಣಾ ಆಯೋಗ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಿದೆ' ಎಂದು ಪ್ರಿಯಾಂಕಾ ಗಾಂಧಿ ಟ್ವೀಟಿಸಿದ್ದಾರೆ.

ಇನ್ನು ಅಸ್ಸಾಂನಲ್ಲಿ ಗುರುವಾರ 39 ವಿಧಾನಸಭೆ ಸ್ಥಾನಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಿತು. ನಿನ್ನೆ ಸಂಜೆ 6ರ ವರೆಗೂ ಒಟ್ಟು ಶೇ 73.03ರಷ್ಟು ಮತದಾನ ದಾಖಲಾಗಿದೆ.
 


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp