
ಪ್ರಿಯಾಂಕಾ ಗಾಂಧಿ
ನವದೆಹಲಿ: ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಕೋವಿಡ್ -19 ಪಾಸಿಟಿವ್ ಕಂಡು ಬಂದ ಕಾರಣ ಪತ್ನಿ ಪ್ರಿಯಾಂಕಾ ವಾದ್ರಾ ಐಸೋಲೇಷನ್ ನಲ್ಲಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರು ಇನ್ನು ಚುನಾವಣಾ ಪ್ರಚಾರದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ, ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿದ್ದರು. ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ವ್ಯಾಪಕವಾಗಿ ಪಾಲ್ಗೊಂಡಿದ್ದರು. ಇದೀಗ ರಾಬರ್ಟ್ ವಾದ್ರಾ ಅವರ ಕೋವಿಡ್ ವರದಿಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪ್ರಿಯಾಂಕಾ ವಾದ್ರಾ ಕೂಡ ಐಸೋಲೇಷನ್ಗೆ ಒಳಗಾಗಿದ್ದಾರೆ.
'ಇತ್ತೀಚೆಗೆ ಕೊರೊನಾ ಸೋಂಕಿಗೆ ತೆರೆದುಕೊಂಡ ಕಾರಣದಿಂದ ನನ್ನ ಅಸ್ಸಾಂ ಪ್ರವಾಸವನ್ನು ರದ್ದುಗೊಳಿಸಬೇಕಾಗಿದೆ. ನಿನ್ನೆ ಬಂದ ವರದಿಯಲ್ಲಿ ನೆಗೆಟಿವ್ ಎಂದು ತಿಳಿದುಬಂದಿದೆ. ಆದರೆ ವೈದ್ಯರ ಸಲಹೆಯಂತೆ ನಾನು ಇನ್ನು ಕೆಲವು ದಿನಗಳವರೆಗೆ ಐಸೋಲೇಷನ್ನಲ್ಲಿ ಇರಲಿದ್ದೇನೆ. ಈ ಅಡಚಣೆಗಾಗಿ ಎಲ್ಲರಿಗೂ ಕ್ಷಮೆ ಕೋರುತ್ತೇನೆ. ಕಾಂಗ್ರೆಸ್ನ ಗೆಲುವಿಗಾಗಿ ನಾನು ಪ್ರಾರ್ಥಿಸುತ್ತೇನೆ' ಎಂದು ಪ್ರಿಯಾಂಕಾ ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ.
ತಮ್ಮ ನಿಗದಿಯಾದ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಅಸ್ಸಾಂನ ಕಾಂಗ್ರೆಸ್ ಘಟಕಕ್ಕೆ ಪ್ರಿಯಾಂಕಾ ಗಾಂಧಿ ಈಗಾಗಲೇ ಸೂಚಿಸಿದ್ದಾರೆ. ಅವರು ಗೋಲ್ಪರ, ಗೋಲಗಂಜ್ ಮತ್ತು ಕಯಾಕುಚಿಗಳಲ್ಲಿ ಶುಕ್ರವಾರ ಪ್ರಚಾರ ಸಭೆಗಳನ್ನು ನಡೆಸಬೇಕಿತ್ತು.
हाल में कोरोना संक्रमण के संपर्क में आने के चलते मुझे अपना असम दौरा रद्द करना पड़ रहा है। मेरी कल की रिपोर्ट नेगेटिव आई है मगर डॉक्टरों की सलाह पर मैं अगले कुछ दिनों तक आइसोलेशन में रहूँगी। इस असुविधा के लिए मैं आप सभी से क्षमाप्रार्थी हूँ। मैं कांग्रेस विजय की प्रार्थना करती हूँ pic.twitter.com/B1PlDyR8rc
— Priyanka Gandhi Vadra (@priyankagandhi) April 2, 2021