ದೆಹಲಿಯಲ್ಲಿ ಕೋವಿಡ್ 19 ನಾಲ್ಕನೇ ಅಲೆ: ಲಾಕ್ ಡೌನ್ ಬಗ್ಗೆ ಸಿಎಂ ಕೇಜ್ರಿವಾಲ್ ಸ್ಪಷ್ಟನೆ

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ 19 ನಾಲ್ಕನೆ ಅಲೆ ಆರಂಭವಾಗಿದ್ದು,  ಲಾಕ್ ಡೌನ್ ಘೋಷಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

Published: 02nd April 2021 07:17 PM  |   Last Updated: 02nd April 2021 07:17 PM   |  A+A-


Delhi Chief Minister Arvind Kejriwal

ಅರವಿಂದ್ ಕೇಜ್ರಿವಾಲ್

Posted By : Shilpa D
Source : PTI

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ 19 ನಾಲ್ಕನೆ ಅಲೆ ಆರಂಭವಾಗಿದ್ದು,  ಲಾಕ್ ಡೌನ್ ಘೋಷಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿರುವ ಅವರು, 'ಕಳೆದ ಕೆಲ ದಿನಗಳಲ್ಲಿ ದೆಹಲಿಯಾದ್ಯಂತ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 3,583 ಹೊಸ ಪ್ರಕರಣಗಳು ವರದಿಯಾಗಿವೆ. ನಾವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಜನರು ಆತಂಕಪಡುವ ಅಗತ್ಯವಿಲ್ಲ' ಎಂದು ಹೇಳಿದ್ದಾರೆ.

ನಾವು ಕೋವಿಡ್‌ ಲಸಿಕೆ ವಿತರಣೆ ಮೇಲೆ ಗಮನ ಹರಿಸಿದ್ದೇವೆ. ನಿನ್ನೆ(ಗುರುವಾರ) ದೆಹಲಿಯಲ್ಲಿ 71,000 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್‌ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅರವಿಂದ್‌ ಕೇಜ್ರಿವಾಲ್‌ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಭವಿಷ್ಯದಲ್ಲಿ ಲಾಕಿ ಡೌನ್ ಘೋಷಿಸುವ ಬಗ್ಗೆ ಸಂಬಂಧಪಟ್ಟವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ, ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ, ಸರ್ಕಾರ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ನಾಗರಿಕರು ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಬಳಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp