ನಮ್ಮ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಪ್ಲೀಸ್…‌ ಮೋದಿಗೆ ಡಿಎಂಕೆ ಅಭ್ಯರ್ಥಿಗಳ ವಿಚಿತ್ರ ಬೇಡಿಕೆ!

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿಪಕ್ಷ ಡಿಎಂಕೆ ಅಭ್ಯರ್ಥಿಗಳು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಚಿತ್ರ ಮನವಿಯನ್ನು ಮುಂದಿಟ್ಟಿದ್ದಾರೆ.

Published: 02nd April 2021 05:54 PM  |   Last Updated: 02nd April 2021 06:09 PM   |  A+A-


PM modi

ಪ್ರಧಾನಿ ಮೋದಿ

Posted By : Lingaraj Badiger
Source : UNI

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿಪಕ್ಷ ಡಿಎಂಕೆ ಅಭ್ಯರ್ಥಿಗಳು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಚಿತ್ರ ಮನವಿಯನ್ನು ಮುಂದಿಟ್ಟಿದ್ದಾರೆ.

ತಾವು ಸ್ಪರ್ಧಿಸುತ್ತಿರುವ ಕ್ಷೇತ್ರಗಳಲ್ಲಿ ಎಐಎಡಿಎಂಕೆ-ಮಿತ್ರ ಪಕ್ಷಗಳ ಪರವಾಗಿ ಪ್ರಧಾನಿ ಮೋದಿ ಪ್ರಚಾರ ನಡೆಸಬೇಕೆಂದು ಅವರು ಕೋರಿದ್ದಾರೆ. ಪ್ರಧಾನಿ ಪ್ರಚಾರ ನಡೆಸಿದರೆ ತಮ್ಮ ಗೆಲುವಿನ ಸಾಧ್ಯತೆಗಳು ಮತ್ತಷ್ಟು ಹೆಚ್ಚಾಗುತ್ತವೆ ಎಂದು ವ್ಯಂಗ್ಯವಾಡಿದ್ದಾರೆ.

ಟ್ವೀಟರ್‌ ನಲ್ಲಿ ಡಿಎಂಕೆ ಅಭ್ಯರ್ಥಿ ಆರ್.ಎಸ್.ರಾಜಕಣ್ಣಪ್ಪನ್... "ಪ್ರಧಾನಮಂತ್ರಿಗಳೇ ... ದಯವಿಟ್ಟು ನಮ್ಮ ಕ್ಷೇತ್ರದಲ್ಲಿ ಪ್ರಚಾರ ಮಾಡಿ. ನಾನು ಇಲ್ಲಿ ಡಿಎಂಕೆ ಅಭ್ಯರ್ಥಿ. ನೀವು ಇಲ್ಲಿ ಪ್ರಚಾರ ಮಾಡಿದರೆ ನನ್ನ ಗೆಲುವಿನ ಸಾಧ್ಯತೆಗಳು ಮತ್ತಷ್ಟು ಹೆಚ್ಚಾಗಲಿದೆ. ಥ್ಯಾಂಕ್ಯೂ ಸರ್ .. '' ಎಂದು ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದರೂ, ತಮಿಳುನಾಡಿನಲ್ಲಿ ಆ ಪಕ್ಷ ದೊಡ್ಡ ಹಿನ್ನಡೆ ಅನುಭವಿಸಿತು. ಡಿಎಂಕೆ ಹಾಗೂ ಅದರ ಮಿತ್ರಪಕ್ಷಗಳು 39 ಲೋಕಸಭಾ ಸ್ಥಾನಗಳಲ್ಲಿ 38 ಸ್ಥಾನಗಳಲ್ಲಿ ದ್ವಿಗ್ವಿಜಯ ಸಾಧಿಸಿತ್ತು. ಈ ತಿಂಗಳ 6 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಡಿಎಂಕೆ ಹಾಗೂ ಅದರ ಮಿತ್ರ ಪಕ್ಷಗಳ ನಾಯಕರು ಮೋದಿಯ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp