ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದುದಕ್ಕೆ ಬೈದ ಪೋಷಕರು: ನೊಂದ ಬಾಲಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!

ಮೊಬೈಲ್ ಫೋನ್ ನಲ್ಲಿ ಗೇಮ್ಸ್ ಆಡಬೇಡವೆಂದು ಪೋಷಕರು ಬುದ್ದಿ ಹೇಳಿದ್ದಕ್ಕೆ ನೊಂದು 15 ವರ್ಷದ ಬಾಲಕ ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

Published: 02nd April 2021 12:46 PM  |   Last Updated: 02nd April 2021 01:29 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : PTI

ನೊಯ್ಡಾ: ಮೊಬೈಲ್ ಫೋನ್ ನಲ್ಲಿ ಗೇಮ್ಸ್ ಆಡಬೇಡವೆಂದು ಪೋಷಕರು ಬುದ್ದಿ ಹೇಳಿದ್ದಕ್ಕೆ ನೊಂದು 15 ವರ್ಷದ ಬಾಲಕ ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

ಪೋಷಕರು ಬೈದರೆಂದು ರಾತ್ರೋರಾತ್ರಿ ಮನೆಯಿಂದ ಹೇಳದೆ ಹೋದ 7ನೇ ತರಗತಿ ಬಾಲಕ ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಜಿಗಿದು ಪ್ರಾಣ ಕಳೆದುಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಬೈಲ್ ನಲ್ಲಿ ಗೇಮ್ ಆಡುವ ಗೀಳು ಹಚ್ಚಿಸಿಕೊಂಡ ಬಾಲಕ ಪೋಷಕರು ಬೈದರೆಂದು ರಾತ್ರಿ 8 ಗಂಟೆ ಸುಮಾರಿಗೆ ಮನೆಬಿಟ್ಟು ಹೋಗಿದ್ದಾನೆ. ಇಂದು ಬೆಳಗ್ಗೆ ಆತನ ಮೃತದೇಹ ಮನೆ ಹತ್ತಿರದ ನಿರ್ಮಾಣ ಕಟ್ಟಡದ ಕೆಳಗೆ ಸಿಕ್ಕಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಎಲಮರನ್ ಜಿ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಶವವನ್ನು ಕಳುಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ವಿಧಿವಿಜ್ಞಾನ ಪ್ರಯೋಗಾಲಯದವರು ಕೂಡ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ನೊಯ್ಡಾ ಮತ್ತು ಗ್ರೇಟರ್ ನೊಯ್ಡಾದಲ್ಲಿ ಕಳೆದ ಬುಧವಾರ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 22 ವರ್ಷದ ಮತ್ತು 35 ವರ್ಷದ ಯುವಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp