ಜಮ್ಮು-ಕಾಶ್ಮೀರ: ಪುಲ್ವಾಮ ಬಳಿ ಉಗ್ರರನ್ನು ಸುತ್ತುವರೆದು ಭದ್ರತಾ ಪಡೆಗಳಿಂದ ಎನ್ಕೌಂಟರ್!

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಕಾಕಾಪುರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

Published: 02nd April 2021 10:04 AM  |   Last Updated: 02nd April 2021 01:06 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಕಾಕಾಪುರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಸ್ಥಳದಲ್ಲಿ 2-3 ಉಗ್ರರು ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಕುರಿತು ಮಾಹಿತಿ ತಿಳಿದು ಬರುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸೇನಾಪಡೆ ಹಾಗೂ ಸಿಆರ್'ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

ಸ್ಥಳದಲ್ಲಿ ಕಳೆದ ರಾತ್ರಿಯಿಂದ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಇನ್ನೂ ಮುಂದುವರೆದಿದೆ. ಮೂಲಗಳ ಪ್ರಕಾರ, ಭಾರತೀಯ ಸೇನಾ ಪಡೆ ಹಾಗೂ ಪೊಲೀಸರು 2-3 ಉಗ್ರರನ್ನು ಸುತ್ತುವರೆದು ಎನ್ಕೌಂಟರ್ ನಡೆಸುತ್ತಿದ್ದಾರೆಂದು ಎನ್ನಲಾಗುತ್ತಿದೆ. 

ಕಾಕಾಪುರದಲ್ಲಿ ಸೇನಾ ಪಡೆಯಿಂದ ಸುತ್ತುವರೆಯಲ್ಪಟ್ಟಿರುವ ಇಬ್ಬರು ಉಗ್ರರು ಈ ಹಿಂದೆ ನೌಗಾಮ್​ನಲ್ಲಿ ಬಿಜೆಪಿ ನಾಯಕರೊಬ್ಬರ ಮನೆಯನ್ನು ಉಗ್ರರು ಗುರಿಯಾಗಿಸಿಕೊಂಡು ದಾಳಿ ನಡೆಸಲು ಮುಂದಾದಾಗ ಅಲ್ಲಿ ಭದ್ರತೆಗಿದ್ದ ಕಾಶ್ಮೀರದ ಪೊಲೀಸರನ್ನು ಹತ್ಯೆಗೈದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ವರ್ಷ ಉಗ್ರರ ಹುಟ್ಟಡಗಿಸಲು ಕಾಶ್ಮೀರದ ಗಡಿಯಲ್ಲಿ ಸಾಲು ಸಾಲು ಗುಂಡಿನ ದಾಳಿಗಳು ನಡೆಯುತ್ತಲೇ ಇವೆ. ಕಾಶ್ಮೀರದ ಕಣಿವೆಯಲ್ಲಿ ಈ ವರ್ಷ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಪುಲ್ವಾಮಾ ಹಾಗೂ ಶೋಪಿಯಾನ್ ​ನಲ್ಲೇ ಅತಿಹೆಚ್ಚು ಕಾರ್ಯಾಚರಣೆ ನಡೆದಿದೆ ಎಂದು ವರದಿಗಳು ತಿಳಿಸಿವೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp