ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಹಿರಿಯ ರಾಜಕಾರಣಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ 

Published: 03rd April 2021 02:20 PM  |   Last Updated: 03rd April 2021 02:27 PM   |  A+A-


Farooq Abdullah

ಫಾರೂಕ್ ಅಬ್ದುಲ್ಲಾ

Posted By : Shilpa D
Source : PTI

ಶ್ರೀನಗರ: ಹಿರಿಯ ರಾಜಕಾರಣಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ 

ಈ ಸಂಬಂಧ ಟ್ವೀಟ್ ಮಾಡಿರುವ ಫಾರೂಕ್ ಅಬ್ದುಲ್ಲಾ ಪುತ್ರ ಓಮರ್ ಅಬ್ದುಲ್ಲಾ, ವೈದ್ಯರ ಸಲಹೆಯ ಮೇರೆಗೆ ಮುಂಜಗ್ರತಾ ಕ್ರಮವಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ತಂದೆಗೆ ನೀಡಿದ ಬೆಂಬಲ ಹಾಗೂ ಹಾರೈಕೆಗೆ ನಮ್ಮ ಕುಟುಂಬದವರೆಲ್ಲರೂ ನಿಮಗೆ ಋಣಿಯಾಗಿರುತ್ತೇವೆ ಎಂದು ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ. ಫಾರೂಕ್ ಅಬ್ದುಲ್ಲಾ ಅವರಿಗೆ ಮಂಗಳವಾರ ಕೊರೋನಾ ಪಾಸಿಟಿವ್ ಪತ್ತೆಯಾಗಿತ್ತು,

ಹೀಗಾಗಿ ಅವರನ್ನು ಐಸೋಲೇಷನ್ ನಲ್ಲಿಡಲಾಗಿತ್ತು, ಆದರೆ ವೈದ್ಯರ ಸಲಹೆಯಂತೆ ಆಸ್ಪತ್ರೆದೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶೀಘ್ರ ಗುಣಮುಖವಾಗುವಂತೆ ಫಾರೂಕ್ ಅಬ್ದುಲ್ಲಾ ಅವರಿಗೆ ಹಾರೈಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp