ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ: ಲಾಕ್ ಡೌನ್ ಅಲ್ಲಗಳೆಯಲು ಸಾಧ್ಯವಿಲ್ಲ ಎಂದ ಸಿಎಂ ಉದ್ಧವ್ ಠಾಕ್ರೆ!

ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದರೆ ಲಾಕ್ ಡೌನ್ ನ್ನು ಅಲ್ಲಗಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. 

Published: 03rd April 2021 12:30 AM  |   Last Updated: 03rd April 2021 01:17 PM   |  A+A-


Maharashtra CM Uddhav Thackeray warns of shortage of health facilities, says lockdown can not be ruled out

ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ: ಲಾಕ್ ಡೌನ್ ಅಲ್ಲಗಳೆಯಲು ಸಾಧ್ಯವಿಲ್ಲ ಎಂದ ಸಿಎಂ ಠಾಕ್ರೆ!

Posted By : Srinivas Rao BV
Source : The New Indian Express

ಮುಂಬೈ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದರೆ ಲಾಕ್ ಡೌನ್ ನ್ನು ಅಲ್ಲಗಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. 

ಏ.02 ರಂದು ಮಾತನಾಡಿದ ಉದ್ಧವ್ ಠಾಕ್ರೆ, ಪರಿಸ್ಥಿತಿ ಸುಧಾರಣೆಯಾಗದೇ ಇದ್ದಲ್ಲಿ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ. ಜೀವನದ ಜೊತೆಗೆ ಜನತೆಯ ಜೀವವೂ ತುಂಬಾ ಮುಖ್ಯವಾದದ್ದು ಎಂದು ಠಾಕ್ರೆ ಹೇಳಿದ್ದಾರೆ. 

"ಪ್ರತಿದಿನ 40,000- 45,000 ಕೊರೋನಾ ಪಾಸಿಟೀವ್ ಪ್ರಕರಣಗಳು ವರದಿಯಾಗುತ್ತಿದೆ. ಪರಿಸ್ಥಿತಿ ಹದಗೆಟ್ಟರೆ, ಆರೋಗ್ಯ ಮೂಲಸೌಕರ್ಯಗಳ ಮೇಲೆ ಒತ್ತಡ ಬೀಳಲಿದೆ. ವೈದ್ಯರು ಹಾಗೂ ಆರೋಗ್ಯ ತಂತ್ರಜ್ಞರ ಕೊರತೆ ಉಂಟಾಗಲಿದೆ" ಎಂದು ಠಾಕ್ರೆ ತಿಳಿಸಿದ್ದಾರೆ. ಆರೋಗ್ಯ ತಜ್ಞರನ್ನು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ, ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದೂ ಸಿಎಂ ತಿಳಿಸಿದ್ದಾರೆ. 

ಜನತೆ ಸಹಕರಿಸಿದರೆ ಲಾಕ್ ಡೌನ ಅಗತ್ಯವಿಲ್ಲ, ಆದರೆ ಪ್ರಸರಣ ತಡೆಯುವುದಕ್ಕೆ ಲಾಕ್ ಡೌನ್ ಒಂದೇ ಪರಿಹಾರ, ಯುರೋಪಿಯನ್ ರಾಷ್ಟ್ರಗಳಲ್ಲೂ ಇದನ್ನೇ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರತಿ ದಿನ 1 ಲಕ್ಷ ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದೆ ಈಗ ಅದನ್ನು 2.5 ಲಕ್ಷ ಪರೀಕ್ಷೆಗಳಿಗೆ ಏರಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಠಾಕ್ರೆ ಹೇಳಿದ್ದಾರೆ. 


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp