ಕೊರೋನಾ ಹೆಚ್ಚಳ: ಪುಣೆಯಲ್ಲಿ ಮತ್ತಷ್ಟು ಕಠಿಣ ನಿರ್ಬಂಧ, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ

ಪುಣೆಯಲ್ಲಿ ಕೊರೋನಾ ವೈರಸ್ ಎರಡನೇ ಅಲೆಯ ಅಬ್ಬರ ಹೆಚ್ಚಾಗಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದ ಮುಂದಿನ ಒಂದು ವಾರಗಳ ಕಾಲ ನಗರದ...

Published: 03rd April 2021 03:06 PM  |   Last Updated: 03rd April 2021 03:07 PM   |  A+A-


Service charge in hotel, restaurant bills not mandatory; govt issues guidelines

ಸಾಂದರ್ಭಿಕ ಚಿತ್ರ

Posted By : Lingaraj Badiger
Source : ANI

ಪುಣೆ: ಪುಣೆಯಲ್ಲಿ ಕೊರೋನಾ ವೈರಸ್ ಎರಡನೇ ಅಲೆಯ ಅಬ್ಬರ ಹೆಚ್ಚಾಗಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದ ಮುಂದಿನ ಒಂದು ವಾರಗಳ ಕಾಲ ನಗರದ ಎಲ್ಲಾ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.

ಈಗಾಗಲೇ ಪುಣೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಒಂದು ವಾರಗಳ ಕಾಲ ಧಾರ್ಮಿಕ ಸ್ಥಳಗಳು, ಹೋಟೆಲ್ ಗಳು, ಬಾರ್ ಗಳು, ಶಾಫಿಂಗ್ ಮಾಲ್ ಗಳು ಮತ್ತು ಚಿತ್ರಮಂದಿರಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಪುಣೆ ಮಹಾನಗರ ನಿಗಮದ ಬಸ್ ಸಂಚಾರವನ್ನು ಕೂಡಾ ಒಂದು ವಾರಗಳ ಕಾಲ ಸ್ಥಗಿತಗೊಳಿಸಲಾಗಿದೆ. 

ಕರ್ಫ್ಯೂ ಅವಧಿಯಲ್ಲಿ ಕೇವಲ ಹೋಮ್ ಡೆಲಿವರಿ, ಅತ್ಯಾವಶ್ಯಕ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ದೇಶದಲ್ಲಿ ಕೊರೋನಾ ಹೊಸ ಅಲೆಯಿಂದ ತತ್ತರಿಸಿರುವ ಪ್ರದೇಶಗಳಲ್ಲಿ ಪುಣೆ ಸಹ ಒಂದಾಗಿದೆ.

ಸರ್ಕಾರ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಿರುವುದು ಸರಿಯಾದ ನಿರ್ಧಾರ. ಇದು ಹೆಚ್ಚುತ್ತಿರುವ ಕರೋನಾ ವೈರಸ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ, ನಾವು ಅದನ್ನು ಬೆಂಬಲಿಸಬೇಕು. ಸ್ವಲ್ಪ ಅಡಚಣೆಯಾಗುತ್ತದೆ. ಆದರೆ ಇದು ಎಲ್ಲರಿಗೂ ಒಳ್ಳೆಯದು" ಎಂದು ಪುಣೆ ನಿವಾಸಿ ಸ್ವಪ್ನ ಅವರು ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp